ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಐಟಿಬಿಪಿಯ 53 ನೇ ಬೆಟಾಲಿಯನ್‌ನ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೊಹ್ಕಮೆಟಾ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಲ್ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಐಇಡಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ

ಇಬ್ಬರು ಐಟಿಬಿಪಿ ಸಿಬ್ಬಂದಿಗಳು ಐಇಡಿ ಮೇಲೆ ಹೆಜ್ಜೆ ಹಾಕಿದ್ದು. ಈ ವೇಳೆ ಐಇಡಿ ಸ್ಫೋಟಗೊಂಡಿದೆ. ಪರಿಣಾಮ ಇಬ್ಬರು ಯೋಧರು ಗಾಯಗೊಂಡರು ಎಂದು ಹೇಳಿದ್ದಾರೆ.

ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com