ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ

ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಗುಂಡಿನ ಚಕಮಕಿಯಲ್ಲಿ ಈವರೆಗೆ ಎಂಟು ನಕ್ಸಲರು ಹತ್ಯೆಯಾಗಿದ್ದಾರೆ. ಇದೇ ವೇಳೆ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಪ್ರಾತಿನಿಧಿಕ ಚಿತ್ರ
ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53ನೇ ಬೆಟಾಲಿಯನ್‌ನ ಸಿಬ್ಬಂದಿಯನ್ನು ಒಳಗೊಂಡ ಕಾರ್ಯಾಚರಣೆಯನ್ನು ಜೂನ್ 12 ರಂದು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com