ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.
ಬಿಭವ್ ಕುಮಾರ್
ಬಿಭವ್ ಕುಮಾರ್
Updated on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ.

ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

ಬಿಭವ್ ಕುಮಾರ್ ಅವರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಇದೀಗ ಬಿಭವ್ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದ್ದು, ಜೂನ್ 22ರಂದು ಅವರನ್ನು ಹಾಜರುಪಡಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಲಾಯಿತು.

ಇದಕ್ಕೂ ಮುನ್ನ ಶುಕ್ರವಾರ, ತನಿಖಾಧಿಕಾರಿ (ಐಒ) ಹಾಜರಾಗದಿರುವುದನ್ನು ಗಮನಿಸಿದ ನ್ಯಾಯಾಲಯವು ಕುಮಾರ್ ಅವರ ಕಸ್ಟಡಿಯನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿತ್ತು. ಹಲ್ಲೆ ಪ್ರಕರಣದಲ್ಲಿ ಮೇ 18ರಂದು ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿತ್ತು.

ಬಿಭವ್ ಕುಮಾರ್
ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ

ಮೇ 16 ರಂದು ಬಿಭವ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com