ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ: ಹೊಸ ಪ್ರಕರಣ ದಾಖಲಿಸಿದ ಮುಂಬೈ ಪೊಲೀಸರು; ರಾಜಸ್ಥಾನದಲ್ಲಿ ಓರ್ವನ ಬಂಧನ

ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸಲ್ಮಾನ್ ಖಾನ್
ಸಲ್ಮಾನ್ ಖಾನ್
Updated on: 

ಮುಂಬೈ: ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಗುರುತಿಸಲಾಗಿದೆ ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ 'ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್ ಸದಸ್ಯರು ನನ್ನೊಂದಿಗಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ಇನ್ನೂ ಕ್ಷಮೆ ಕೇಳದ ಕಾರಣ ನಾನು ಅವರನ್ನು ಕೊಲ್ಲಲಿದ್ದೇನೆ' ಎಂದು ಹೇಳಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ವಿಡಿಯೋ ಮಾಡಿ ತನ್ನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಗಾಗಿ ತಂಡವನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಮುಂಬೈನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಲ್ಮಾನ್ ಖಾನ್
ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಮತ್ತೊಬ್ಬ ಸದಸ್ಯನ ಬಂಧನ

ಆರೋಪಿ ಗುರ್ಜಾರ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದೆಯೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. 506(2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.

ಏಪ್ರಿಲ್ 14ರ ಮುಂಜಾನೆ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲವು ಸುತ್ತು ಗುಂಡು ಹಾರಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ ಒಬ್ಬನಾದ ಅನುಜ್ ಥಾಪನ್ ಮೇ 1 ರಂದು ಪೊಲೀಸ್ ಲಾಕ್‌ಅಪ್‌ನಲ್ಲಿ ನೇಣು ಬಿಗಿದುಕೊಂಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com