ಪೆಟ್ರೋಲ್, ಡೀಸೆಲ್ ದರ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಹರ್ದೀಪ್ ಸಿಂಗ್ ಪುರಿ
ಹರ್ದೀಪ್ ಸಿಂಗ್ ಪುರಿ
Updated on

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8,500 ರೂ.ಗಳನ್ನು ವರ್ಗಾಯಿಸುವ ಭರವಸೆಯನ್ನು ಈಡೇರಿಸದ ನಂತರ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ ದರವನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಟೀಕಿಸಿದ್ದಾರೆ.

ಹರ್ದೀಪ್ ಸಿಂಗ್ ಪುರಿ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

"ಈ ನಿರ್ಧಾರದ ನಂತರ ಇಂಧನ ಬೆಲೆಗಳು ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಕರ್ನಾಟಕದ ಜನರು ಆಹಾರ ಪದಾರ್ಥಗಳು, ಬಟ್ಟೆ, ಔಷಧಿಗಳು ಮತ್ತಿತರ ಎಲ್ಲಾ ಮೂಲಭೂತ ವಸ್ತುಗಳಿಗೆ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಚುನಾವಣೆ ಮುಗಿದ ನಂತರ ಸರ್ಕಾರದ ಇಂತಹ ನಿರ್ಧಾರ ಕಾಂಗ್ರೆಸ್ ನ ಹೈಪೋಕ್ರಿಸಿಯನ್ನು ಬಹಿರಂಗಪಡಿಸಿದೆ. ಇದರೊಂದಿಗೆ ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿರುವುದಾಗಿ ಅವರು ಹೇಳಿದ್ದಾರೆ.

ಹರ್ದೀಪ್ ಸಿಂಗ್ ಪುರಿ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಹಿಂಪಡೆಯುವಂತೆ ಆಗ್ರಹ, ಜೂನ್ 17 ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ಯುರೋಪಿನಲ್ಲಿನ ಯುದ್ಧದಿಂದಾಗಿ ಜಗತ್ತು ಇಂಧನ ಬೆಲೆ ಏರಿಕೆಯನ್ನು ಎದುರಿಸುತ್ತಿರುವ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾದ ಏಕೈಕ ದೇಶವಾಗಿ ಭಾರತ ಉಳಿದಿದೆ ಎಂಬುದನ್ನು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಖಾತ್ರಿಪಡಿಸಿದೆ ಎಂದು ಪುರಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com