
ಚೈಬಾಸಾ (ಜಾರ್ಖಂಡ್): ಜಾರ್ಖಂಡ್‌ನ ಚೈಬಾಸಾದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಈ ವೇಳೆ ನಾಲ್ವರು ನಕ್ಸಲರನ್ನು ಹತ್ಯೆ ಮಾಡಿ, ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಹತ್ಯೆಯಾದ ನಾಲ್ವರು ನಕ್ಸಲರಲ್ಲಿ ಝೋನಲ್ ಕಮಾಂಡರ್, ಸಬ್ ಜೋನಲ್ ಕಮಾಂಡರ್ ಹಾಗೂ ಏರಿಯಾ ಕಮಾಂಡರ್ ಸೇರಿದ್ದಾರೆ. ಬಂಧಿತ ಇಬ್ಬರೂ ಸ್ಥಳೀಯ ನಕ್ಸಲ್ ಕಮಾಂಡರ್ ಗಳಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಶನಿವಾರ ಮುಂಜಾನೆ, ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಅರಣ್ಯದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಸಾವನ್ನಪ್ಪಿದರು. ಅಲ್ಲದೆ, ಓರ್ವ ಯೋಧ ಹುತಾತ್ಮರಾಗಿದ್ದರು.
ಯಶಸ್ವಿ ಕಾರ್ಯಾಚರಣೆಗಾಗಿ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ನಕ್ಸಲೀಯರ ವಿರುದ್ಧ ರಾಜ್ಯ ಸರ್ಕಾರವು ಪ್ರಬಲವಾಗಿ ಹೋರಾಡುತ್ತಿದೆ ಎಂದು ಹೇಳಿದ್ದಾರೆ
Advertisement