ದೇಶದೆಲ್ಲೆಡೆ ಸಂಭ್ರಮದ ಬಕ್ರೀದ್ ಆಚರಣೆ; ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ಬಕ್ರೀದ್​ ​ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ಮುರ್ಮು-ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ರಾಷ್ಟ್ರಪತಿ ಮುರ್ಮು-ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on

ನವದೆಹಲಿ: ಬಕ್ರೀದ್​ ​ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ಈ ಪವಿತ್ರ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ. ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ.ಈದ್ ಮುಬಾರಕ್ ಎಂದು ಟ್ವಿಟರ್​​ ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರಪತಿ ಮುರ್ಮು-ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Bakrid 2024: ಬಕ್ರೀದ್ ಹಬ್ಬ ಹಿನ್ನೆಲೆ ಕುರ್ಬಾನಿ ಜಾನುವಾರುಗಳಿಗೆ ಭಾರಿ ಬೇಡಿಕೆ; ದರ ಏರಿಕೆ!

ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ದೇಶ ಮತ್ತು ವಿದೇಶಗಳಲ್ಲಿ ವಾಸಿಸುವ ಮುಸ್ಲಿಂ ಸಹೋದರ ಸಹೋದರಿಯರಿಗೆ ಈದ್-ಉಲ್-ಅಧಾ ಶುಭಾಶಯಗಳು. ಈ ತ್ಯಾಗದ ಹಬ್ಬವು ನಮ್ಮ ಸಂತೋಷವನ್ನು ಎಲ್ಲರೊಂದಿಗೆ, ವಿಶೇಷವಾಗಿ ನಿರ್ಗತಿಕ ಜನರೊಂದಿಗೆ ಹಂಚಿಕೊಳ್ಳುವ ಸಂದೇಶವನ್ನು ನೀಡುತ್ತದೆ. ಈ ಸಂದರ್ಭದಲ್ಲಿ, ಎಲ್ಲಾ ದೇಶವಾಸಿಗಳ, ವಿಶೇಷವಾಗಿ ವಂಚಿತ ವರ್ಗಗಳಿಗೆ ಸೇರಿದ ಜನರ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದ್ದಾರೆ.

ಇಸ್ಲಾಮಿಕ್ ಕ್ಯಾಲೆಂಡರ್‌ನ 12 ನೇ ತಿಂಗಳಲ್ಲಿ ಅಂದರೆ ತಿಂಗಳು ಏ-ಜಿಲ್ಹಿಜ್ಜಾದಲ್ಲಿ 'ಈದ್-ಉಲ್-ಅಜಹಾ' ಹಬ್ಬವನ್ನು ಆಚರಿಸಲಾಗುತ್ತದೆ. ಮುಸ್ಲಿಂ ಸಮುದಾಯದ ಜನರಿಗೆ ಈ ಹಬ್ಬ ಬಹಳ ವಿಶೇಷವಾಗಿದೆ. ಈದ್-ಉಲ್-ಅಝಾ ಸಂದರ್ಭದಲ್ಲಿ ತ್ಯಾಗವನ್ನು ಮಾಡಲಾಗುತ್ತದೆ. ಆದ್ದರಿಂದ ಈ ಹಬ್ಬವನ್ನು ಬಕ್ರೀದ್ ಎಂದೂ ಕರೆಯುತ್ತಾರೆ.

ಈ ವರ್ಷ ಈ ವಿಶೇಷ ಹಬ್ಬವನ್ನು ಸೋಮವಾರ ಅಂದರೆ ಜೂನ್ 17 ರಂದು ಆಚರಿಸಲಾಗುತ್ತಿದೆ. ಈಗಾಗಲೇ ಮುಸ್ಲಿಂ ಬಾಂಧವರಲ್ಲಿ ಹಬ್ಬದ ಕಳೆ ಕಟ್ಟಿದೆ. ಈ ಹಬ್ಬದ ಸಮಯದಲ್ಲಿ ಇವರು ಅಪ್ಪುಗೆ ನೀಡುವ ಮೂಲಕ ಪರಸ್ಪರ ಶುಭಾಶಯಗಳನ್ನು ಹಂಚಿಕೊಳ್ಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com