
ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದ ನಂತರ ಎಂಟು ಮೃತದೇಹಗಳನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ(ಎನ್‌ಬಿಎಂಸಿಎಚ್) ತರಲಾಗಿದ್ದರೆ, ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಇಂದು ಸಾವನ್ನಪ್ಪಿದ್ದಾಳೆ ಎಂದು ಎನ್‌ಬಿಎಂಸಿಎಚ್ ಡೀನ್ ಡಾಕ್ಟರ್ ಸಂದೀಪ್ ಸೇನ್‌ಗುಪ್ತಾ ಅವರು ಪಿಟಿಐಗೆ ತಿಳಿಸಿದ್ದಾರೆ.
ರೈಲು ಅಪಘಾತದ ನಂತರ ಮೂವತ್ತೇಳು ಜನರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರು ಪ್ರಾಥಮಿಕ ಚಿಕಿತ್ಸೆ ನಂತರ ಮನೆಗೆ ಹೋಗಿದ್ದಾರೆ ಎಂದು ಅವರು ಹೇಳಿದರು.
"ಇನ್ನೂ ಮೂವರು ಟ್ರಾಮಾ ಕೇರ್ ಯೂನಿಟ್‌ನಲ್ಲಿದ್ದಾರೆ. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕೆಲ ರೋಗಿಗಳ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿವೆ" ಎಂದು ಸೇನ್‌ಗುಪ್ತಾ ಅವರು ತಿಳಿಸಿದ್ದಾರೆ.
Advertisement