0.001% ನಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಸರಿಪಡಿಸಬೇಕು: NEET-UG ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ

NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರ ಕುರಿತು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ 0.001% ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಒಪ್ಪಿಕೊಂಡು ಸರಿಪಡಿಸಬೇಕು ಎಂದು ಎನ್ ಟಿಎ ಗೆ ಹೇಳಿದೆ.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರ ಕುರಿತು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ 0.001% ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಒಪ್ಪಿಕೊಂಡು ಸರಿಪಡಿಸಬೇಕು ಎಂದು ಎನ್ ಟಿಎ ಗೆ ಹೇಳಿದೆ.

"ಪರೀಕ್ಷಾ ಸಂಸ್ಥೆಯಾಗಿ, ನೀವು ನ್ಯಾಯಯುತವಾಗಿ ವರ್ತಿಸಬೇಕು. ತಪ್ಪಿದ್ದರೆ, ಹೌದು, ಇದು ತಪ್ಪು ಎಂದು ಹೇಳಿ, ಯಾರಿಗೆ ಸಂಬಂಧಿಸಿದಂತೆಯಾದರೂ 0.001% ನಿರ್ಲಕ್ಷ್ಯವಿದ್ದರೆ, ಅದನ್ನು ಸಂಪೂರ್ಣವಾಗಿ ಸರಿಪಡಿಸಿಕೊಳ್ಳಬೇಕು ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ನೇತೃತ್ವದ ಉನ್ನತ ನ್ಯಾಯಾಲಯದ ದ್ವಿಸದಸ್ಯ ರಜಾಕಾಲದ ಪೀಠ ಹೇಳಿದೆ.

NEET-UG, 2024 ರಲ್ಲಿನ ಆಪಾದಿತ ಪೇಪರ್ ಸೋರಿಕೆ ಮತ್ತು ದುಷ್ಕೃತ್ಯಗಳಿಗೆ ಸಂಬಂಧಿಸಿದಂತೆ ಈ ಹೊಸ ಮನವಿಗಳ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮತ್ತು ಕೇಂದ್ರದಿಂದ ವಿವರವಾದ ಪ್ರತಿಕ್ರಿಯೆಯನ್ನು ನೀಡುವಂತೆ ಕಠಿಣವಾದ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್‌ನ ಪೀಠ ಈ ಸಂಬಂಧ ನೋಟಿಸ್ ಜಾರಿ ಮಾಡಿದೆ.

ಮಕ್ಕಳು ಪರೀಕ್ಷೆಗಳಿಗೆ ತಯಾರಿ ನಡೆಸಿದ್ದಾರೆ ಮತ್ತು ಈ ಪರೀಕ್ಷೆಗಳಿಗೆ ತಯಾರಿ ನಡೆಸಲು ಅವರ ಶ್ರಮವನ್ನು ನಾವು ಮರೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಮತ್ತು ಎನ್‌ಟಿಎ ಪರವಾಗಿ ಹಾಜರಾದ ವಕೀಲರಿಗೆ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

Supreme court
NEET-UG 2024 ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTA ಗೆ ಸುಪ್ರೀಂ ಕೋರ್ಟ್ ನೊಟೀಸ್

ಯೂನಿಯನ್ ಆಫ್ ಇಂಡಿಯಾ (ಯುಒಐ), ಎನ್‌ಟಿಎ, ನೇಷನ್ ಮೆಡಿಕಲ್ ಕಮಿಷನ್ (ಎನ್‌ಎಂಸಿ), ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ವಿರುದ್ಧ ಅಮೂಲ್ಯ ವಿಜಯಾ ಪಿನಾಪಾಟಿ, ನಿತಿನ್ ವಿಜಯ್ ಮತ್ತು ಇತರರು ಸಲ್ಲಿಸಿರುವ ಹೊಸ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಿತು.

NEET-UG ವಿರುದ್ಧ ಸಲ್ಲಿಸಲಾದ ಈ ಅರ್ಜಿಗಳನ್ನು ಪ್ರತಿಕೂಲ ದಾವೆಯಾಗಿ ತೆಗೆದುಕೊಳ್ಳಬೇಡಿ ಎಂದು ಮಾನವೀಯ ದೃಷ್ಟಿಕೋನದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು NTA ಗೆ ಹೇಳಿದೆ. ನೀವು ಈ ಎಲ್ಲವನ್ನು ಜುಲೈ 8 ರಂದು ವಾದಿಸಬಹುದು, ಅದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವಾಗಿದೆ ಎಂದು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com