ದೇಶ

ಅಮಿತ್ ಶಾ ವಿರುದ್ಧ ಟೀಕೆ: ರಾಹುಲ್ ಗಾಂಧಿ ವಿರುದ್ಧದ ಮಾನ ಹಾನಿ ಪ್ರಕರಣದ ವಿಚಾರಣೆ ಜೂ. 26ಕ್ಕೆ ಮುಂದೂಡಿಕೆ

ಅಮಿತ್ ಶಾ ವಿರುದ್ಧ ಟೀಕೆ: ರಾಹುಲ್ ಗಾಂಧಿ ವಿರುದ್ಧದ ಮಾನ ಹಾನಿ ಪ್ರಕರಣದ ವಿಚಾರಣೆ ಜೂ. 26ಕ್ಕೆ ಮುಂದೂಡಿಕೆ
ಅಮಿತ್ ಶಾ ಮತ್ತು ರಾಹುಲ್ ಗಾಂಧಿ
Published On :

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಂಗಳವಾರ ಜೂನ್ 26ಕ್ಕೆ ಮುಂದೂಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರ್ಜಿದಾರರ ಪರ ವಕೀಲರಾದ ಸಂತೋಷ್ ಕುಮಾರ್ ಪಾಂಡೆ ಅವರು, ಮಂಗಳವಾರದಂದು ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26 ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು.

ಈ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಫೆಬ್ರವರಿ 20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.

ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಗಸ್ಟ್ 4, 2018 ರಂದು ದೂರು ದಾಖಲಿಸಲಾಗಿದೆ.

ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕೊಲೆ ಪ್ರಕರಣದಲ್ಲಿ "ಆರೋಪಿ"ಯಾಗಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿರುವುದಾಗಿ ದೂರುದಾರರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.