
ನವದೆಹಲಿ: ದೆಹಲಿಯ ಆರ್ ಎಂಎಲ್ ಹಾಗೂ ಸಫ್ದರ್ ಜಂಗ್ ಆಸ್ಪತ್ರೆಗಳಲ್ಲಿ ಈ ಸಾವುಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಶಾಖ ಮಾರುತಗಳು ಇದ್ದು, ಗುರುವಾರ ಬೆಳಿಗ್ಗೆ ಮಳೆಯಿಂದಾಗಿ ಸ್ವಲ್ಪ ತಣ್ಣಗಾಗಿದೆ. ದೆಹಲಿಯ ಆಸ್ಪತ್ರೆಗಳಲ್ಲಿ ಶಾಖದ ಹೊಡೆತದಿಂದಾಗಿ ಸಾವುನೋವುಗಳು ಮತ್ತು ರೋಗಿಗಳ ಸಂಖ್ಯೆ ಏರುಗತಿಯಲ್ಲಿದೆ.
ಸಫ್ದರ್‌ಜಂಗ್ ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಶಾಖ-ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ 33 ರೋಗಿಗಳು ದಾಖಲಾಗಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ 33 ಮಂದಿ ಶಾಖಾಘಾತದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದು, ಇಲ್ಲಿ ಕಳೆದ 24 ಗಂಟೆಗಳಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 22 ರೋಗಿಗಳು ಶಂಕಿತ ಶಾಖದ ಹೊಡೆತಕ್ಕೆ ಒಳಗಾಗಿದ್ದು, ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Advertisement