ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ ವಿಶೇಷ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಇಂದು ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು, ಅರವಿಂದ್ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.

ಅರವಿಂದ ಕೇಜ್ರಿವಾಲ್
ಅಬಕಾರಿ ನೀತಿ ಹಗರಣ: ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ಜಾಮೀನು ಬಾಂಡ್‌ಗಳನ್ನು ಸ್ವೀಕರಿಸಲು ತನಿಖಾ ಸಂಸ್ಥೆಗೆ 48 ಗಂಟೆಗಳ ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com