
ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ-ಯುಜಿ)ಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಭ್ಯರ್ಥಿಗಳು ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ಸುಮಾರು 30 ರಿಂದ 32 ಲಕ್ಷ ರೂ. ನೀಡಿ ಖರೀದಿಸಿರುವುದಾಗಿ ತನಿಖಾ ತಂಡಕ್ಕೆ ತಿಳಿಸಿದ್ದಾರೆ.
ಬಂಧಿತ ಅಭ್ಯರ್ಥಿ ಅನುರಾಗ್ ಯಾದವ್ ಮತ್ತು ಅವರ ಚಿಕ್ಕಪ್ಪ ಸಿಕಂದರ್ ಯಾದವೆಂದು ಹಾಗೂ ಇತರ ಇಬ್ಬರು - ನಿತೀಶ್ ಕುಮಾರ್ ಮತ್ತು ಅಮಿತ್ ಆನಂದ್ ಅವರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಅವರು ಪೇಪರ್ ಸೋರಿಕೆಯ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂದು ನಂಬಲಾಗಿದೆ.
ತನಿಖಾ ತಂಡದ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳಲ್ಲಿ ನಾಲ್ವರು ಪರೀಕ್ಷೆಗೆ ಒಂದು ದಿನ ಮೊದಲು ಕೆಲವು ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ್ದಾರೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳಿಗೆ ಸುಮಾರು 30 ರಿಂದ 32 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಮೇ 5 ರಂದು ನಡೆದ ಪರೀಕ್ಷೆಯ ಮುನ್ನಾದಿನದಂದು ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ತನಗೆ ನೀಡಲಾಗಿತ್ತು ಮತ್ತು ಉತ್ತರಗಳನ್ನು ನೆನಪಿಟ್ಟುಕೊಳ್ಳುವಂತೆ ಮಾಡಲಾಯಿತು ಎಂದು ಅನುರಾಗ್ ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಪತ್ರದಲ್ಲಿ ತಿಳಿಸಿದ್ದಾರೆ.
ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ನಡೆದಿರುವ ಬಂಧನಗಳು ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಮತ್ತು ಈ ಬಿಜೆಪಿ ಆಡಳಿತದ ರಾಜ್ಯಗಳು ಪೇಪರ್ ಸೋರಿಕೆಯ ಕೇಂದ್ರಬಿಂದುವಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Advertisement