ನೇಣು ಬಿಗಿದುಕೊಂಡು ಕಾಂಗ್ರೆಸ್ ಶಾಸಕನ ಪತ್ನಿ ರೂಪಾದೇವಿ ಆತ್ಮಹತ್ಯೆ!

ಚೊಪ್ಪದಂಡಿ ಕ್ಷೇತ್ರದ ಆಡಳಿತ ಪಕ್ಷದ ಶಾಸಕ ಡಾ. ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ. ಮೇಡಿಪಲ್ಲಿ ಸತ್ಯಂ
ಡಾ. ಮೇಡಿಪಲ್ಲಿ ಸತ್ಯಂTNIE
Updated on: 

ಹೈದರಾಬಾದ್: ಚೊಪ್ಪದಂಡಿ ಕ್ಷೇತ್ರದ ಆಡಳಿತ ಪಕ್ಷದ ಶಾಸಕ ಡಾ. ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಲ್ವಾಲ್‌ನ ಪಂಚಶೀಲ ಕಾಲೋನಿ ನಿವಾಸಿ ರೂಪಾ ದೇವಿ ಎಂಬುವರು ಸಂಜೆ ಟೆರೇಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಾಗಿಲು ಒಡೆದು ರೂಪಾದೇವಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಲ್ವಾಲ್ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ವಾಲ್‌ನ ಪಂಚಶೀಲ್ ಕಾಲೋನಿಯಲ್ಲಿರುವ ತಮ್ಮ ಕುಟುಂಬದ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ ಎಂದು ವರದಿಯಾಗಿದೆ.

ಡಾ. ಮೇಡಿಪಲ್ಲಿ ಸತ್ಯಂ
ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ

ಮೇಡಿಪಲ್ಲಿ ಸತ್ಯಂ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದಿದ್ದ ಅವರು ಈ ಹಿಂದೆ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಶಾಸಕರು ನಗರಕ್ಕೆ ಆಗಮಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದರು. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com