
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ 2024ನೇ ಸಾಲಿನ ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಡಿಜಿ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಲಾಗಿದ್ದು, ನಾಳೆ ನಡೆಯಬೇಕಿದ್ದ ನೀಟ್ ಪ್ರವೇಶ ಪರೀಕ್ಷೆಯನ್ನೂ ಕೂಡ ಮುಂದೂಡಿಕೆ ಮಾಡಲಾಗಿದೆ.
ಹೌದು.. ನೀಟ್ ಪ್ರವೇಶ ಪರೀಕ್ಷೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಡಿಜಿ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಲಾಗಿದ್ದು, ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗೆ ಒಳಪಡಿಸಲಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್ಟಿಎ) ನೋಟಿಸ್ ನೀಡಲಾಗಿದೆ.
ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಕಳೆದ 2 ತಿಂಗಳುಗಳಲ್ಲಿ, ದೇಶದ 2 ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ ಮತ್ತು ನೆಟ್ನಲ್ಲಿ ಅಕ್ರಮಗಳು ಮತ್ತು ಪೇಪರ್ ಸೋರಿಕೆಗಳ ಕುರಿತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸತತವಾಗಿ ಮಧ್ಯಪ್ರವೇಶಿಸಿತ್ತು. ಇದೀಗ ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಲಾಗಿದೆ.
ಪ್ರದೀಪ್ ಸಿಂಗ್ ಖರೋಲಾಗೆ NTA ಜವಾಬ್ದಾರಿ
ಇದೇ ವೇಳೆ ನಿವೃತ್ತ IAS ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ಎನ್ ಟಿಎ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದ್ದು, ಪ್ರಸ್ತುತ ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ.
ನಿಯಮಿತ ಪದಾಧಿಕಾರಿಯನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ" NTA ಯ ಮಹಾನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ನಾಳೆಯ ನೀಟ್ ಪ್ರವೇಶ ಪರೀಕ್ಷೆ ಮುಂದೂಡಿಕೆ
ಇದೇ ವೇಳೆ ನಾಳೆ ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಯ ಹೊಸ ದಿನಾಂಕವನ್ನು ಆದಷ್ಟು ಬೇಗ ತಿಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದಂತೆ ಇತ್ತೀಚಿನ ಆರೋಪಗಳ ಘಟನೆಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿಯು ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement