ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಜುಲೈ 6 ರವರೆಗೆ ವಿಸ್ತರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 6ರವರೆಗೆ ವಿಸ್ತರಿಸಿದೆ.
Bibhav Kumar sent to jail for 14 days
ಭಿಭವ್ ಕುಮಾರ್ANI
Updated on

ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 6ರವರೆಗೆ ವಿಸ್ತರಿಸಿದೆ.

ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೇ 18ರಂದು ಕುಮಾರ್ ಅವರನ್ನು ಬಂಧಿಸಲಾಗಿತ್ತು.

ಕುಮಾರ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್, ಕುಮಾರ್ ನ್ಯಾಯಾಂಗ ಬಂಧನವನ್ನು ಜುಲೈ 6 ರವರೆಗೆ ವಿಸ್ತರಿಸಿದ್ದಾರೆ.

Bibhav Kumar sent to jail for 14 days
ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮೇ 16 ರಂದು ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com