
ಪಾಟ್ನಾ: ಬಿಹಾರ ಪೋಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ಘಟಕವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿ) 2024 ರ ಉಲ್ಲೇಖ ಪ್ರಶ್ನೆ ಪತ್ರಿಕೆಗಳನ್ನು ಕಳೆದ ತಿಂಗಳು ಶೋಧ ಕಾರ್ಯಾಚರಣೆ ವೇಳೆ ಪಾಟ್ನಾದ ಫ್ಲಾಟ್ ವೊಂದರಿಂದ ಶೋಧ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ದಾಖಲೆಗಳೊಂದಿಗೆ ಹೋಲಿಕೆ ಮಾಡಲು ಪಡೆದುಕೊಂಡಿದ್ದು, ಪ್ರಕರಣದ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೊಳಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ ತಿಂಗಳಲ್ಲಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಲ್ಲಿನ ಅಕ್ರಮದಲ್ಲಿ ಹಣ ವರ್ಗಾವಣೆಯ ವಿಷಯವನ್ನು ಜಾರಿ ನಿರ್ದೇಶನಾಲಯ(ED) ತನಿಖೆ ಮಾಡಬಹುದು ಎಂದು ಹೇಳಿದ್ದಾರೆ.
ಕಳೆದ ತಿಂಗಳು ತನಿಖೆಯನ್ನು ಪ್ರಾರಂಭಿಸಿದ ನಂತರ ಎನ್‌ಟಿಎಗೆ ಉಲ್ಲೇಖದ ಪ್ರಶ್ನೆ ಪತ್ರಿಕೆಗಳಿಗೆ ವಿನಂತಿಸಿಕೊಂಡಿದ್ದೆವು. ಈ ಪತ್ರಿಕೆಗಳನ್ನು ಕಳೆದ ತಿಂಗಳು ಪಾಟ್ನಾ ಫ್ಲಾಟ್‌ನಿಂದ ವಶಪಡಿಸಿಕೊಂಡ ಭಾಗಶಃ ಸುಟ್ಟ ಪತ್ರಿಕೆಗಳೊಂದಿಗೆ ತಾಳೆ ಮಾಡುತ್ತೇವೆ ಎಂದು ಇಡಿ ಮೂಲಗಳು ತಿಳಿಸಿವೆ.
Advertisement