
ನವದೆಹಲಿ: ಕೇಂದ್ರೀಯ ತನಿಖಾ ದಳ (CBI) NEET-UG ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಅಧಿಕಾರಿಗಳು FIR ದಾಖಲಿಸಿದ್ದಾರೆ.
ಮೇ.05 ರಂದು NEET-UG ಪರೀಕ್ಷೆಗಳು ನಡೆದಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿತ್ತು.
ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಸಿಬಿಐ ಈ ವರೆಗೆ ಗುರುತಿಗೆ ಸಿಗದ ವ್ಯಕ್ತಿಗಳ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 24 ಲಕ್ಷ ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆ ತೆಗೆದುಕೊಂಡಿದ್ದಾರೆ.
ಆಪಾದಿತ ಅಕ್ರಮದ ಕುರಿತು ತನಿಖೆ ನಡೆಸಲು ಹಲವಾರು ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಚಿವಾಲಯ ಪರಿಗಣಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಮೇ 5 ರಂದು ನಡೆಸಲಾದ NEET-UG ನಲ್ಲಿ ಕೆಲವು ಅಕ್ರಮಗಳು, ವಂಚನೆ, ಸೋಗು ಹಾಕುವಿಕೆ ಪ್ರಕರಣಗಳು ವರದಿಯಾಗಿವೆ" ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲು ಪರಿಶೀಲನೆಯ ನಂತರ ನಿರ್ಧರಿಸಲಾಗಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement