ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಜೆಪಿ ನಡ್ಡಾ ನೇಮಕ

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಜೆಪಿ ನಡ್ಡಾ
ಜೆಪಿ ನಡ್ಡಾ
Updated on: 

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ.

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಈ ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಟಿಎಂಸಿ ಸಂಸದ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಜೆಪಿ ನಡ್ಡಾ
ಲೋಕಸಭೆ ಚುನಾವಣೆ ಫಲಿತಾಂಶ ನಮ್ಮ ಸರ್ಕಾರದ ನೀತಿಗಳಿಗೆ ಸಿಕ್ಕಿದ ಜನರ ಅನುಮೋದನೆ: ಪ್ರಧಾನಿ ಮೋದಿ

ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿದ ಇಂಡಿಯಾ ಬಣದ ನಾಯಕರು, ಸಂವಿಧಾನ ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com