Delhi excise policy case: ದೆಹಲಿ ಜೈಲಿನಿಂದಲೇ Arvind Kejriwal ಬಂಧಿಸಿದ CBI; ನಾಳೆ ಕೋರ್ಟ್ ಗೆ ಹಾಜರು, AAP ಆಕ್ರೋಶ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ದೆಹಲಿಯ ತಿಹಾರ್ ಜೈಲಿನಿಂದಲೇ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು.. ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ಮಂಗಳವಾರ ರಾತ್ರಿ ಬಂಧಿಸಿದೆ.
ನಾಳೆ ಅಂದರೆ ಬುಧವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಡೆಯಲಿದ್ದು, ಅದಕ್ಕಿಂತ ಮೊದಲೇ ಸಿಬಿಐ ಅವರನ್ನು ಬಂಧಿಸಿದೆ.
ನಾಳೆ ಕೋರ್ಟ್ ಗೆ ಹಾಜರು
ಸೋಮವಾರ, ಕೇಂದ್ರ ತನಿಖಾ ಸಂಸ್ಥೆಯು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿತ್ತು. ಸಿಬಿಐ ನಾಳೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.
AAP ಆಕ್ರೋಶ
ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, "ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆಯುವ ಸಾಧ್ಯತೆ ಇರುವ ಸಮಯದಲ್ಲಿ, ಕೇಂದ್ರವು ಪಿತೂರಿ ನಡೆಸುತ್ತಿದೆ ಎಂದು ನನಗೆ ಮೂಲಗಳು ತಿಳಿಸಿವೆ” ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ