ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ, 1 ಕೋಟಿ ರೂ. ದಂಡ: ಸುಗ್ರೀವಾಜ್ಞೆಗೆ ಯುಪಿ ಕ್ಯಾಬಿನೆಟ್ ಅಸ್ತು

ಪ್ರಶ್ನಿ ಪತ್ರಿಕೆ ಸೋರಿಕೆ ಮಾಡುವವರಿಗೆ ಮತ್ತು ಅಕ್ರಮ ಎಸಗುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.

ಪ್ರಶ್ನಿ ಪತ್ರಿಕೆ ಸೋರಿಕೆ ಮಾಡುವವರಿಗೆ ಮತ್ತು ಅಕ್ರಮ ಎಸಗುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.

ರಾಜ್ಯ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳಿಗೆ (ROs/AROs) UPPSC ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಈ ಪರೀಕ್ಷೆಗಳನ್ನು ರದ್ದುಗೊಳಿಸಲಾಯಿತು.

ಯೋಗಿ ಆದಿತ್ಯನಾಥ್
ನೀಟ್ ಪೇಪರ್ ಸೋರಿಕೆ: 32 ಲಕ್ಷ ರೂ.ಗೆ ಪ್ರಶ್ನೆ ಪತ್ರಿಕೆ ಮಾರಾಟ

ಈ ಹಿನ್ನೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಪರೀಕ್ಷೆಗಳ ಸುಗ್ರೀವಾಜ್ಞೆ 2024ಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವ ಸುರೇಶ್ ಖನ್ನಾ,

ಸುಗ್ರೀವಾಜ್ಞೆಯ ಪ್ರಕಾರ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಸಾಬೀತಾದರೆ ಎರಡು ವರ್ಷದಿಂದ ಜೀವಾವಧಿ ಶಿಕ್ಷೆಯವರೆಗೆ ಜೈಲು ಶಿಕ್ಷೆ ಮತ್ತು ಅಂತಹ ಅಪರಾಧಿಗಳಿಗೆ 1 ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಸುಗ್ರೀವಾಜ್ಞೆಯು ರಾಜ್ಯ ಸಾರ್ವಜನಿಕ ಸೇವಾ ಆಯೋಗ, ಅಧೀನ ಸೇವಾ ಆಯ್ಕೆ ಮಂಡಳಿ, ಉತ್ತರ ಪ್ರದೇಶ ಮಂಡಳಿ, ವಿಶ್ವವಿದ್ಯಾಲಯಗಳು ಮತ್ತು ಅವುಗಳಿಂದ ನಾಮನಿರ್ದೇಶನಗೊಂಡ ಸಂಸ್ಥೆಗಳ ಪರೀಕ್ಷೆಗಳನ್ನು ಒಳಗೊಂಡಿದೆ ಎಂದು ಸಚಿವರು ತಿಳಿಸಿದರು.

ಇದು ಯಾವುದೇ ರೀತಿಯ ನೇಮಕಾತಿ ನೇಮಕಾತಿ ಪರೀಕ್ಷೆಗಳು, ಬಡ್ತಿ ಪರೀಕ್ಷೆಗಳು ಮತ್ತು ಪದವಿಗಳು, ಡಿಪ್ಲೋಮಾಗಳು ಮತ್ತು ಪ್ರಮಾಣಪತ್ರಗಳಿಗೆ ಪ್ರವೇಶ ಪರೀಕ್ಷೆಗಳನ್ನು ಒಳಗೊಂಡಿದೆ.

ಈ ಸುಗ್ರೀವಾಜ್ಞೆಯ ಅಡಿಯಲ್ಲಿ, ನಕಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವುದು ಮತ್ತು ನಕಲಿ ಉದ್ಯೋಗ ವೆಬ್‌ಸೈಟ್‌ಗಳನ್ನು ಮಾಡುವುದು ಶಿಕ್ಷಾರ್ಹ ಅಪರಾಧಗಳೆಂದು ಗುರುತಿಸಲಾಗಿದೆ ಎಂದು ಖನ್ನಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com