Delhi excise policy case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 3 ದಿನ CBI ವಶಕ್ಕೆ

ಕೇಂದ್ರೀಯ ತನಿಖಾ ಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
Arvind Kejriwal
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶರು ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಸಿಬಿಐ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ನೀಡಿದ್ದಾರೆ.

Arvind Kejriwal
ಇಡೀ ವ್ಯವಸ್ಥೆ ದೆಹಲಿ ಸಿಎಂಗೆ ಜಾಮೀನು ಸಿಗದಂತೆ ನೋಡಿಕೊಳ್ಳುತ್ತಿದೆ, ಇದು ಸರ್ವಾಧಿಕಾರ: ಸುನಿತಾ ಕೇಜ್ರಿವಾಲ್

ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ತನಿಖಾ ಸಂಸ್ಥೆ ಬುಧವಾರ ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತ್ತು. ಇದೀಗ 3 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಜಾರಿ ಇಲಾಖೆ (ಇಡಿ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಕೂಡ ಆಗಿರುವ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದಾರೆ.

ಕೇಜ್ರಿವಾಲ್ ಅವರ ಕಸ್ಟಡಿಗೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಪ್ರಕರಣದಲ್ಲಿ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಲು ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ಪ್ರಕರಣದಲ್ಲಿ ಆರೋಪಿ ಗಳಾಗಿರುವ ಇತರ ವ್ಯಕ್ತಿಗಳ ಸಾಕ್ಷ್ಯಾಧಾರಗಳೊಂದಿಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರನ್ನು ವಿಚಾರಣೆ ನಡೆಸಬೇಕಿದೆ ಎಂದು ಸಿಬಿಐ ಹೇಳಿದೆ.

ಈಗ ರದ್ದಾದ ಅಬಕಾರಿ ನೀತಿಯನ್ನು ರೂಪಿಸಲು "ಸೌತ್ ಲಾಬಿ" ಎಂದು ಕರೆಯಲ್ಪಡುವವರು ನಿರ್ದೇಶಿಸಿದ್ದಾರೆ ಮತ್ತು ಮುಖ್ಯಮಂತ್ರಿಗಳು ಈ ಎಲ್ಲದರಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆಗಳು ಈ ಹಿಂದೆ ಆರೋಪಿಸಿದ್ದವು. ಇದೇ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಪುತ್ರಿ ಕೆಚಂದ್ರಶೇಖರ್ ರಾವ್ ಪುತ್ರಿ ಕವಿತಾ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com