ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ

ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭದರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಗ್ಗೆ 9.50 ರ ಸುಮಾರಿಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 11 ರಂದು ಚತ್ತರಗಲ್ಲದ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಗಾಯಗೊಂಡರು. ಈ ಅವಳಿ ದಾಳಿಯ ನಂತರ, ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದವು ಮತ್ತು ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.

ಸಾಂದರ್ಭಿಕ ಚಿತ್ರ
ಭಯೋತ್ಪಾದಕರ ಹೊಸ ನೆಲೆಯಾಗಲಿದೆಯೇ ಜಮ್ಮು?; ಉಗ್ರರ ಬದಲಾದ ಕಾರ್ಯ ವಿಧಾನಕ್ಕೆ ಇತ್ತೀಚಿನ ಹಿಂಸಾಚಾರಗಳೇ ಸಾಕ್ಷಿ!

ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು, ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.

ಏತನ್ಮಧ್ಯೆ, ರಾಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com