3 ಹೊಸ ಕ್ರಿಮಿನಲ್ ಕಾನೂನು ಮಸೂದೆ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ

2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ 2023 ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶದಿಂದ ಮತ್ತು ಭಾರತೀಯ ದಂಡ ಸಂಹಿತೆ 1860, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 1872 ನ್ನು ರದ್ದುಪಡಿಸುತ್ತದೆ.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗುತ್ತಿರುವ ಭಾರತೀಯ ನ್ಯಾಯ ಸಂಹಿತಾ, 2023, ಭಾರತೀಯ ಸಾಕ್ಷಿ ಅಧಿನಿಯಮ್, 2023 ಮತ್ತು ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ, 2023 ನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತಾ, 2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಎಂದು ಹೆಸರಿಸಲಾದ ಮೂರು ಹೊಸ ತಿದ್ದುಪಡಿ ಕ್ರಿಮಿನಲ್ ಕಾನೂನುಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ತಕ್ಷಣ ತಜ್ಞರ ಸಮಿತಿಯನ್ನು ರಚಿಸುವಂತೆ ನಿರ್ದಿಷ್ಟ ನಿರ್ದೇಶನಗಳನ್ನು ಕೋರಿ ನೋಟಿಸ್ ನೀಡುವಂತೆ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ 2023 ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶದಿಂದ ಮತ್ತು ಭಾರತೀಯ ದಂಡ ಸಂಹಿತೆ 1860, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 1872 ನ್ನು ರದ್ದುಪಡಿಸುತ್ತದೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ 2023, ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತಾ 2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ 2023 ರ ಕಾರ್ಯಾಚರಣೆ ಮತ್ತು ಅನುಷ್ಠಾನಕ್ಕೆ ತಡೆ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅಂಜಲಿ ಪಟೇಲ್ ಮತ್ತು ಛಾಯಾ ಎಂಬ ಇಬ್ಬರು ವ್ಯಕ್ತಿಗಳು ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಕುನ್ವರ್ ಸಿದ್ಧಾರ್ಥ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

"3 ಪ್ರಸ್ತಾವಿತ ಮಸೂದೆಗಳನ್ನು ಹಿಂತೆಗೆದುಕೊಳ್ಳಲಾಯಿತು ಮತ್ತು ಕೆಲವು ಬದಲಾವಣೆಗಳೊಂದಿಗೆ ಹೊಸ ಮಸೂದೆಗಳನ್ನು ತಯಾರಿಸಲಾಯಿತು. ಇವುಗಳನ್ನು 21 ಡಿಸೆಂಬರ್ 2023 ರಂದು ಸಂಸತ್ತು ಅಂಗೀಕರಿಸಿತು ಮತ್ತು 25 ನೇ ಡಿಸೆಂಬರ್ 2023 ರಂದು ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಯಿತು ಮತ್ತು ಅವೆಲ್ಲವೂ ಈಗ ಕಾಯಿದೆಯ ಸ್ಥಾನವನ್ನು ಪಡೆದುಕೊಂಡಿವೆ," ಎಂದು ಮನವಿಯಲ್ಲಿ ಹೇಳಲಾಗಿದೆ.

Supreme court
Zero FIR, ಆನ್‌ಲೈನ್ ದೂರು, ನಾಗರಿಕ ಸ್ನೇಹಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ!

ಮೊದಲ ಬಾರಿಗೆ ಕ್ರಿಮಿನಲ್ ಕಾನೂನುಗಳಲ್ಲಿ ಇಂತಹ ಮಟ್ಟದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಹಳೆಯ ವಸಾಹತುಶಾಹಿ ಕಾನೂನನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗುತ್ತದೆ. ವಸಾಹತುಶಾಹಿ ಆಳ್ವಿಕೆಯ ಪ್ರಮುಖ ಸಂಕೇತವೆಂದರೆ ಬ್ರಿಟಿಷರ ಕಾಲದಿಂದಲೂ ಮುಂದುವರಿದ ಪೊಲೀಸ್ ವ್ಯವಸ್ಥೆಯಾಗಿದ್ದು ಇದಕ್ಕೆ ಸುಧಾರಣೆಗಳ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com