ಸುಧಾರಣೆ, ಕಾರ್ಯಕ್ಷಮತೆ, ಪರಿವರ್ತನೆ ಭಾರತವನ್ನು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ಮಾಡಿದೆ: ರಾಷ್ಟ್ರಪತಿ ಮುರ್ಮು ಭಾಷಣ

ಲೋಕಸಭೆಗೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ಓಂ ಬಿರ್ಲಾ ಅವರನ್ನು ಅಭಿನಂದಿಸುವುದರ ಮೂಲಕ ರಾಷ್ಟ್ರಪತಿಯವರು ತಮ್ಮ ಭಾಷಣವನ್ನು ಆರಂಭಿಸಿದರು.
ಜಂಟಿ ಸದನವನ್ನುದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಭಾಷಣ
ಜಂಟಿ ಸದನವನ್ನುದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಭಾಷಣ
Updated on

ನವದೆಹಲಿ: ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರವು ಭಾರತವನ್ನು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ದೇಶವನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

18ನೇ ಲೋಕಸಭೆಯ ಅಧಿವೇಶನದ 4ನೇ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಉಭಯ ಸದನಗಳ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಇದು ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ನಂತರದ ಮುರ್ಮು ಅವರ ಮೊದಲ ರಾಷ್ಟ್ರಪತಿ ಭಾಷಣವಾಗಿದೆ.

ಇಂದು ಸಂಸತ್ತಿಗೆ ಆಗಮಿಸಿದ ಅವರನ್ನು ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು.

ಲೋಕಸಭೆಗೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ಓಂ ಬಿರ್ಲಾ ಅವರನ್ನು ಅಭಿನಂದಿಸುವುದರ ಮೂಲಕ ರಾಷ್ಟ್ರಪತಿಯವರು ತಮ್ಮ ಭಾಷಣವನ್ನು ಆರಂಭಿಸಿದರು. ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ ಚುನಾವಣಾ ಆಯೋಗವನ್ನು ಅಭಿನಂದಿಸಿದರು. ಹೊಸದಾಗಿ ರಚನೆಯಾದ ಲೋಕಸಭೆಯ ಎಲ್ಲಾ ಚುನಾಯಿತ ಸದಸ್ಯರಿಗೆ ಅಭಿನಂದನೆ ಮತ್ತು ಶುಭಾಶಯಗಳನ್ನು ತಿಳಿಸಿದರು.

ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರದ ಆಡಳಿತದ ಮೇಲೆ ಜನರು ವಿಶ್ವಾಸ ಹೊಂದಿದ್ದಾರೆ. ಆರು ದಶಕಗಳ ನಂತರ ಮೂರನೇ ಬಾರಿಗೆ ಮೈತ್ರಿ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ ಜನರ ಪ್ರೀತಿ, ವಿಶ್ವಾಸವನ್ನು ಇದು ತೋರಿಸುತ್ತದೆ. ಭಾರತದ ಜನರು ತಮ್ಮ ಆಕಾಂಕ್ಷೆಗಳನ್ನು ನಮ್ಮ ಸರ್ಕಾರ ಮಾತ್ರ ಈಡೇರಿಸಬಲ್ಲದು ಎಂಬ ವಿಶ್ವಾಸ ಹೊಂದಿದ್ದಾರೆ ಎಂದರು.

ಜಂಟಿ ಸದನವನ್ನುದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಭಾಷಣ
18ನೇ ಲೋಕಸಭೆ ಜನರ ಆಶೋತ್ತರಗಳನ್ನು ಈಡೇರಿಸುತ್ತದೆ ಎಂಬ ವಿಶ್ವಾಸ ನನಗಿದೆ: ಸ್ಪೀಕರ್ ಓಂ ಬಿರ್ಲಾಗೆ ಪ್ರಧಾನಿ ಮೋದಿ ಅಭಿನಂದನೆ

ಕಾಶ್ಮೀರದ ಮತದಾನದ ಕುರಿತು ಮಾತನಾಡಿದ ರಾಷ್ಟ್ರಪತಿಗಳು, ಕಾಶ್ಮೀರದಲ್ಲಿ ಮತದಾನದ ಹಲವಾರು ದಾಖಲೆಗಳು ಮುರಿದುಹೋಗಿವೆ. ಇದು ಭಾರತದ ಶತ್ರುಗಳಿಗೆ ತಕ್ಕ ಉತ್ತರವಾಗಿದೆ ಎಂದರು.

ಹೊಸದಾಗಿ ರಚನೆಯಾದ ಸರ್ಕಾರದ ಆದ್ಯತೆಗಳ ಕುರಿತು ಮಾತನಾಡಿದ ರಾಷ್ಟ್ರಪತಿಗಳು, ಕೇಂದ್ರ ಬಜೆಟ್ ಭವಿಷ್ಯದ ದಾಖಲೆಯಾಗಿದೆ, ಸುಧಾರಣೆಗಳನ್ನು ತ್ವರಿತಗೊಳಿಸಲಾಗುವುದು. ಸರ್ಕಾರವು ಕೃಷಿ ಉತ್ಪನ್ನಗಳಿಗೆ ಶೇಖರಣಾ ಉಪಕ್ರಮದಲ್ಲಿ ಕೆಲಸ ಮಾಡುತ್ತಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ ಎಂದರು.

ಮಣಿಪುರದ ಹೆಸರು ಹೇಳದೆ ಹಿಂಸಾಚಾರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ರಾಷ್ಟ್ರಪತಿಗಳು, ಈಶಾನ್ಯದಲ್ಲಿ ಶಾಶ್ವತ ಶಾಂತಿಗಾಗಿ ಸರ್ಕಾರ ಶ್ರಮಿಸುತ್ತಿದೆ. ಕಳೆದ 10 ವರ್ಷಗಳಲ್ಲಿ ಹಲವಾರು ಹಳೆಯ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು. ಈಶಾನ್ಯ ರಾಜ್ಯದಲ್ಲಿ ಅಭಿವೃದ್ಧಿಯನ್ನು ಪ್ರಾರಂಭಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ಸೇನೆಗೆ ವಿಶೇಷ ಅಧಿಕಾರವನ್ನು ನೀಡುವ ವಿವಾದಾತ್ಮಕ AFSPA ನ್ನು ಹಿಂತೆಗೆದುಕೊಳ್ಳಲು ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com