
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟದ್ದು, ಆತನ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಎಎಪಿ ಶುಕ್ರವಾರ ಒತ್ತಾಯಿಸಿದೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಜಾಸ್ಮಿನ್ ಶಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದೆ ಬಂದು ಈ ಘಟನೆಗೆ ಕಾರಣಗಳನ್ನು ವಿವರಿಸಬೇಕು. "ಇಂದು ಅತ್ಯಂತ ದುಃಖಕರ ಘಟನೆ ನಡೆದಿದೆ ಎಂದರು.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ದೇಶದ ಇತರ ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಡಿಯಲ್ಲಿ ಬರುತ್ತವೆ. ಈ ಘಟನೆಯಲ್ಲಿ ಸುಮಾರು ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಶಾ ಆಗ್ರಹಿಸಿದ್ದಾರೆ.
ಮೃತನ ಕುಟುಂಬಕ್ಕೆ 1 ಕೋಟಿ ರೂಪಾಯಿ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಶಾ ಒತ್ತಾಯಿಸಿದ್ದಾರೆ.
ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ, ನಿರ್ಗಮನ ಪ್ರದೇಶದಲ್ಲಿನ ಮೇಲ್ಛಾವಣಿ ಕುಸಿದುಬಿದ್ದು, ಒಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
Advertisement