
ಗೌತಮ್ ಬುದ್ಧ ನಗರ (ಉತ್ತರ ಪ್ರದೇಶ): ದೆಹಲಿ-ಎನ್‌ಸಿಆರ್‌ನ ಪ್ರದೇಶಗಳಲ್ಲಿ ಭಾರಿ ಮಳೆ ಬೆನ್ನಲ್ಲೇ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಮನೆಯ ಗೋಡೆಯ ಅವಶೇಷಗಳ ಅಡಿಯಲ್ಲಿ ಒಟ್ಟು ಎಂಟು ಮಕ್ಕಳು ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏತನ್ಮಧ್ಯೆ, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಕುರಿತು ಗೌತಮ್ ಬುದ್ಧ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅತುಲ್ ಕುಮಾರ್ ಅವರು ಮಾತನಾಡಿ ಮಾಹಿತಿ ನೀಡಿದ್ದಾರೆ.
ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಎಂಟು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದರು. ಈ ಪೈಕಿ ಮೂವರು ಮಕ್ಕಳು ಸಾವನ್ನಪ್ಪಿದ್ದು ಉಳಿದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ನಾಲ್ಕು ವಾಹನಗಳು ಹಾನಿಗೀಡಾಗಿದ್ದು, ಸಣ್ಣಪುಟ್ಟ ಗಾಯಗೊಂಡ ಎಂಟು ಮಂದಿಗೆ ದೆಹಲಿ ವಿಮಾನ ನಿಲ್ದಾಣದ ಮೇದಾಂತ ಕೇಂದ್ರದಲ್ಲಿ ತಕ್ಷಣದ ವೈದ್ಯಕೀಯ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Advertisement