ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ

ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಉದ್ಧದ ಆರು ಲೇನ್ ಎಕ್ಸ್‌ಪ್ರೆಸ್‌ವೇ ಆಗಿದೆ.
ಸಮೃದ್ಧಿ ಎಕ್ಸ್ ಪ್ರೆಸ್ ವೇ
ಸಮೃದ್ಧಿ ಎಕ್ಸ್ ಪ್ರೆಸ್ ವೇ

ಮಹಾರಾಷ್ಟ್ರ: ಜಲ್ನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಎಂದೂ ಕರೆಯಲ್ಪಡುವ ಮುಂಬೈ-ನಾಗ್‌ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಡವಂಚಿ ಗ್ರಾಮದ ಬಳಿ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರು ಮುಂಬೈ ಮತ್ತು ಬುಲ್ಧಾನ ಜಿಲ್ಲೆಯ ಮಲಾಡ್ (ಪೂರ್ವ) ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ತರಲಾಗಿದೆ ಎಂದು ಜಲ್ನಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಉಮೇಶ್ ಜಾಧವ್ ತಿಳಿಸಿದ್ದಾರೆ. ಮೂವರು ಗಾಯಾಳುಗಳಿಗೆ ಜಲ್ನಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ಸ್ಥಳಾಂತರಿಸಲಾಗಿದ್ದ ಒಬ್ಬ ಗಂಭೀರ ಗಾಯಗೊಂಡ ವ್ಯಕ್ತಿ ನಂತರ ಸಾವನ್ನಪ್ಪಿದ್ದಾರೆ. ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಉದ್ಧದ ಆರು ಲೇನ್ ಎಕ್ಸ್‌ಪ್ರೆಸ್‌ವೇ ಆಗಿದೆ. ನಾಗ್ಪುರದಿಂದ ಶಿರಡಿಗೆ ಸಂಪರ್ಕಿಸುವ ಹೆದ್ದಾರಿಯ ಮೊದಲ ಹಂತವನ್ನು ಡಿಸೆಂಬರ್ 2022 ರಲ್ಲಿ ಉದ್ಘಾಟಿಸಲಾಯಿತು.

ಸಮೃದ್ಧಿ ಎಕ್ಸ್ ಪ್ರೆಸ್ ವೇ
ಹಾವೇರಿ ಅಪಘಾತ: ಚೆಲ್ಲಾಪಿಲ್ಲಿಯಾಗಿದ್ದ ದೇಹಗಳು; ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಗಾಯಾಳುಗಳು; ಕಣ್ಣೆದುರೇ ಪ್ರಾಣಬಿಟ್ಟ ಮಕ್ಕಳು!

"ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಬಹುಪಯೋಗಿ ಕಾರು (MUV) ಮತ್ತು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ MUV ಬ್ಯಾರಿಯರ್ ದಾಟಿ ರಸ್ತೆಯ ಎಡಭಾಗದಲ್ಲಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಜಖಂಡಗೊಂಡ ಕಾರಿನ ಅವಶೇಷಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com