
ಪುಣೆ: ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟೆಯ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಭಾನುವಾರ ಮಹಿಳೆ ಸೇರಿದಂತೆ ಐವರು ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಐವರು ವಿಹಾರಕ್ಕೆಂದು ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಐವರು ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
"ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದು ಅವರು ಹೇಳಿದ್ದಾರೆ.
Advertisement