ಭಾರತೀಯ ಸೇನೆ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ

ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
 ಉಪೇಂದ್ರ ದ್ವಿವೇದಿ
ಉಪೇಂದ್ರ ದ್ವಿವೇದಿ

ನವದೆಹಲಿ: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರು ಭಾನುವಾ ಅಧಿಕಾರ ವಹಿಸಿಕೊಂಡಿದ್ದಾರೆ.

26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್​ ಪಾಂಡೆಯವರು ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿದ್ದರು. ಆದರಿಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದಾರೆ.

ಮನೋಜ್​ ಪಾಂಡೆಯವರು ಮೇ 30ರಂದು ನಿವೃತ್ತರಾಗಬೇಕಾಗಿತ್ತು. ಆದರೆ ಸರ್ಕಾರವು ಅವರ ಸೇವೆಯನ್ನು ಹೆಚ್ಚುವರಿ ತಿಂಗಳಿಗೆ ವಿಸ್ತರಿಸಿತು. ಹಾಗಾಗಿ ಜೂನ್​ 30ರವರೆಗೆ ಸೇವೆ ಸಲ್ಲಿಸಲು ಅವರಿಗೆ ಅವಕಾಶ ನೀಡಿತ್ತು. ಮನೋಜ್​ ಪಾಂಡೆಯವರು ನಿವೃತ್ತರಾದಂತೆ ಇತ್ತ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕರಿಸಿದ್ದಾರೆ.

 ಉಪೇಂದ್ರ ದ್ವಿವೇದಿ
ಸೇನಾ ಮುಖ್ಯಸ್ಥ ಜನರಲ್ ಪಾಂಡೆ ಸೇವಾವಧಿ 1 ತಿಂಗಳು ವಿಸ್ತರಣೆ

ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.

ಫೆಬ್ರವರಿ 19ರಂದು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರವರೆಗೆ ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 18ನೇ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ರೆಜಿಮೆಂಟ್ ಮತ್ತು 26ನೇ ವಲಯದ ಅಸ್ಸಾಂ ರೈಫಲ್ಸ್ ಬ್ರಿಗೇಡ್‌ ಮುಖ್ಯಸ್ಥ, ಅಸ್ಸಾಂ ರೈಫಲ್ಸ್ (ಪೂರ್ವ) ಮತ್ತು 9ನೇ ಕಾರ್ಪ್ಸ್‌ನ ಇನ್ಸ್‌ಪೆಕ್ಟರ್ ಜನರಲ್, ಉತ್ತರ ಕಮಾಂಡ್‌ನಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್–ಇನ್–ಚೀಫ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com