ತ್ರಿಪುರಾ: ಮಾಜಿ ಮಿಸ್ ಇಂಡಿಯಾ ಕ್ಯಾನ್ಸರ್ ಗೆ ಬಲಿ; 28 ವರ್ಷಕ್ಕೆ ಇಹಲೋಕ ತ್ಯಜಿಸಿದ ರಿಂಕಿ ಚಕ್ಮಾ

ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ (28) ನಿಧನರಾಗಿದ್ದಾರೆ.
ರಿಂಕಿ ಚಕ್ಮಾ
ರಿಂಕಿ ಚಕ್ಮಾ

ಅಗರ್ತಲಾ: ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ (28) ನಿಧನರಾಗಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕವು ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಚಕ್ಮಾ ನಿಧನರಾಗಿದ್ದಾರೆ. ಫೆಮಿನಾ ಮಿಸ್‌ ಇಂಡಿಯಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಕಷ್ಟದ ಸಮಯದಲ್ಲಿ ಚಕ್ಮಾ ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಬರಿಸುವ ಶಕ್ತಿ ದೇವರು ಕೊಡಲಿ ಎಂದು ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸಾ ವಿಧಾನಗಳನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದ ಚಕ್ಮಾ, ಶೀಘ್ರ ಗುಣಮುಖವಾಗಿ ಮತ್ತೆ ಸಹಜ ಜೀವನಕ್ಕೆ ಮರಳುತ್ತೇನೆ ಅನ್ನೋ ಭರವಸೆಯಲ್ಲಿದ್ದರು. ಆದ್ರೆ ಆಕೆ ಗುಣಮುಖಳಾಗುವುದಿಲ್ಲ ಎಂದು ತಿಳಿದ ನಂತರ ತನಗೆ ಸ್ತನ ಕ್ಯಾನ್ಸರ್‌ (ಫೈಲೋಡ್ಸ್ ಟ್ಯೂಮರ್) ಇರೋದನ್ನ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಿಂಕಿ ಚಕ್ಮಾ
ಕೇರಳ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಸಾವು

ರಿಂಕಿ ಚಕ್ಮಾ ಅವರು 2017 ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ‘ಬ್ಯೂಟಿ ವಿತ್ ಎ ಪರ್ಪಸ್’ ಪ್ರಶಸ್ತಿಯನ್ನು ಗಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com