JNUನಲ್ಲಿ ಮತ್ತೆ ಭಾರೀ ಜಗಳ: ಎಡ-ಬಲ ಪಂಥೀಯ ವಿದ್ಯಾರ್ಥಿಗಳ ನಡುವೆ ಘರ್ಷಣೆ, ಹೊಡೆದಾಟ!

ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯಲ್ಲಿ ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಭಾರೀ ಜಗಳ ನಡೆದಿದೆ. ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳಾದ ಅನ್ವೇಶಾ ರೈ, ಮಧುರಿಮಾ ಮತ್ತು ಶೌರ್ಯ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
JNU Campus: ಜೆಎನ್​ಯು ಕ್ಯಾಂಪಸ್​ನಲ್ಲಿ ದೇಶ ವಿರೋಧಿ ಘೋಷಣೆ; ಪ್ರತಿಭಟನೆಗೆ ನಿಷೇಧ​; ನಿಯಮ ಪಾಲಿಸದ ವಿದ್ಯಾರ್ಥಿಗಳ ಉಚ್ಛಾಟನೆ

ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಎಬಿವಿಪಿ ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆಸಿದೆ. ಬಳಿಕ ಇದು ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಘರ್ಷಣೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವ ದೃಶ್ಯ ಸೆರೆಯಾಗಿದೆ. ಮತ್ತೊಂದು ವಿಡಿಯೊದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಸೈಕಲ್ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ (ನೈಋತ್ಯ) ರೋಹಿತ್ ಕುಮಾರ್ ಮೀನಾ, ಜೆಎನ್‌ಯುನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆಯುತ್ತಿದೆ ಎಂದು ರಾತ್ರಿ 1:15 ರ ಸುಮಾರಿಗೆ ಪಿಸಿಆರ್ ಕರೆ ಬಂತು. ಈ ಸಂಬಂಧ ಹಲವು ದೂರುಗಳು ಬಂದಿದ್ದು, ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ ಮತ್ತು ಘಟನೆಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com