ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಲು ಮುಂದಿನ ವಾರ ಸಿಡಬ್ಲ್ಯುಸಿ ಸಭೆ

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ನ ಸಿಡಬ್ಲ್ಯುಸಿ ಹಾಗೂ ಸಿಇಸಿ ಸಭೆಗಳು ಮುಂದಿನ ವಾರ ನಡೆಯಲಿದೆ.
ಕಾಂಗ್ರೆಸ್ ಸಭೆ
ಕಾಂಗ್ರೆಸ್ ಸಭೆ

ನವದೆಹಲಿ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ನ ಸಿಡಬ್ಲ್ಯುಸಿ ಹಾಗೂ ಸಿಇಸಿ ಸಭೆಗಳು ಮುಂದಿನ ವಾರ ನಡೆಯಲಿದೆ. ಅಭ್ಯರ್ಥಿಗಳ ಪಟ್ಟಿಯ ಜೊತೆ ಜೊತೆಗೇ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.

ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಯ ಸಭೆಯು ಅಭ್ಯರ್ಥಿಗಳ ಪಟ್ಟಿ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸ್ಕ್ರೀನಿಂಗ್ ಕಮಿಟಿಗಳು ಕೆಲವನ್ನು ಹೊರತುಪಡಿಸಿ ಬಹುತೇಕ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸ್ಕ್ರೀನಿಂಗ್ ಸಮಿತಿಗಳು ಸಿದ್ಧಪಡಿಸಿದ ಅಭ್ಯರ್ಥಿಗಳ ಸಮಿತಿಯನ್ನು ಸಿಇಸಿ ಚರ್ಚಿಸುತ್ತದೆ ಮತ್ತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಸಮಿತಿ ಬಹುತೇಕ ಎಲ್ಲಾ ಈಶಾನ್ಯ ರಾಜ್ಯಗಳು, ಕೇರಳ, ಮಧ್ಯಪ್ರದೇಶ ಮತ್ತು ಗೋವಾ ಸೇರಿದಂತೆ ಸುಮಾರು 100 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ ಸಭೆ
ಸರ್ಕಾರ ಬೀಳಿಸಲು ಬಿಜೆಪಿ ಯತ್ನ; ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ: ಸಿದ್ದರಾಮಯ್ಯ ಗಂಭೀರ ಆರೋಪ

ಗೆಹ್ಲೋಟ್, ಪೈಲಟ್ ಕಣದಿಂದ ಹೊರಕ್ಕೆ?

ಕಾಂಗ್ರೆಸ್ ಸಿಇಸಿ ಸಭೆಯು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಅವರಂತಹ ಉನ್ನತ ನಾಯಕರ ಉಮೇದುವಾರಿಕೆಯನ್ನು ನಿರ್ಧರಿಸುವ ಸಾಧ್ಯತೆಯಿದೆ. ರಾಜಸ್ಥಾನದ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com