ರ‍್ಯಾಲಿಯಲ್ಲಿ ಪ್ರಧಾನಿ ಮೋದಿ - ನಿತೀಶ್ ಕುಮಾರ್
ರ‍್ಯಾಲಿಯಲ್ಲಿ ಪ್ರಧಾನಿ ಮೋದಿ - ನಿತೀಶ್ ಕುಮಾರ್

ಇನ್ನು ಮುಂದೆ ಎನ್‌ಡಿಎನಲ್ಲೇ ಶಾಶ್ವತವಾಗಿ ಇರುತ್ತೇನೆ: ಪ್ರಧಾನಿ ಮೋದಿ ರ‍್ಯಾಲಿಯಲ್ಲಿ ನಿತೀಶ್ ಕುಮಾರ್

ನಿತೀಶ್ ಭರವಸೆ: ಎನ್‌ಡಿಎ ಜೊತೆ ಶಾಶ್ವತ ಸಂಬಂಧ, ಬಿಹಾರದ ಅಭಿವೃದ್ಧಿಗೆ ಹೊಸ ಚಿಗುರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎನಲ್ಲಿ ಶಾಶ್ವತವಾಗಿ ಇರುವುದಾಗಿ ಭರವಸೆ ನೀಡಿದ್ದಾರೆ.

ಔರಂಗಾಬಾದ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ನಲ್ಲಿ ಶಾಶ್ವತವಾಗಿ ಇರುವುದಾಗಿ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ 21,400 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿತೀಶ್ ಕುಮಾರ್ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ನಾನು ಶಾಶ್ವತವಾಗಿ ಎನ್‌ಡಿಎನಲ್ಲಿಯೇ ಇರುತ್ತೇನೆ ಎಂದು ಈಗ ಪ್ರಧಾನಿಗೆ ಭರವಸೆ ನೀಡುತ್ತೇನೆ ಎಂದರು.

ನಿತೀಶ್ ಕುಮಾರ್ ಅವರು ಕಳೆದ ತಿಂಗಳು ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆಗೆ ಮೈತ್ರಿ ಮುರಿದುಕೊಂಡು ತಮ್ಮ ಹಳೆಯ ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷದೊಂದಿಗೆ ಹೊಸ ಸರ್ಕಾರ ರಚಿಸಿದ್ದರು.

ರ‍್ಯಾಲಿಯಲ್ಲಿ ಪ್ರಧಾನಿ ಮೋದಿ - ನಿತೀಶ್ ಕುಮಾರ್
ನಿತೀಶ್ ಮತ್ತೊಮ್ಮೆ ಯು-ಟರ್ನ್ ಹೊಡೆಯಲ್ಲ ಎಂದು ಪ್ರಧಾನಿ ಮೋದಿ ಗ್ಯಾರಂಟಿ ನೀಡಬಹುದೇ?: ತೇಜಸ್ವಿ ಯಾದವ್ ಟಾಂಗ್

"ಬಿಹಾರಕ್ಕೆ ನಾವು ನಿಮ್ಮನ್ನು(ಪ್ರಧಾನಿ) ಸ್ವಾಗತಿಸುತ್ತೇವೆ. ಬಿಹಾರದಲ್ಲಿ ಸಾಕಷ್ಟು ಅಭಿವೃದ್ದಿಗಳು ನಡೆಯುತ್ತಿವೆ. ಈಗ ಈ ಕೆಲಸಗಳು ವೇಗವಾಗಿ ನಡೆಯಲಿವೆ ಮತ್ತು ಬಿಹಾರ ಅಭಿವೃದ್ಧಿಯ ಹೊಸ ಮೈಲಿಗಲ್ಲು ತಲುಪುತ್ತದೆ. ಬಿಹಾರದ ಜನ ಈಗ ಆರ್ಥಿಕವಾಗಿ ಹೆಚ್ಚು ಸಬಲರಾಗುತ್ತಾರೆ" ಎಂದು ನಿತೀಶ್ ಕುಮಾರ್ ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com