ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: 2019 ರ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಲೋಕಸಭೆ ಚುನಾವಣೆಗೂ ಮುನ್ನ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.

ಅಮಿತ್ ಶಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಂತನು ಠಾಕೂರ್ ಅವರು, "ಇದು ಅತ್ಯಂತ ಅಗತ್ಯವಾದ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ ಮತ್ತು ಅದನ್ನು ಕಾರ್ಯಗತಗೊಳಿಸುವುದು ನಮಗೆ ಮುಖ್ಯವಾಗಿದೆ ಎಂದು ಅವರು ವಿವರಿಸಿದರು.

ನಾವು ಗಡಿಯಾಚೆಯಿಂದ ಬರುವ ಜನರಿಗೆ ಆಶ್ರಯ ನೀಡಬೇಕು ಮತ್ತು ಅವರು ಇಲ್ಲಿಯೇ ಉಳಿದುಕೊಳ್ಳಬೇಕು. ಸಿಎಎ ಪ್ರಸ್ತುತ ಇರುವ ನಾಗರಿಕರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಸಿಎಎ ಅನ್ನು ರಾಜ್ಯ ಸರ್ಕಾರಗಳ ಯಾವುದೇ ಪಾತ್ರವಿಲ್ಲದ ರೀತಿಯಲ್ಲಿ ಜಾರಿಗೊಳಿಸಲಾಗುವುದು. ದೇಶದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿಸಲು ಅವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ" ಎಂದು ಠಾಕೂರ್ ಅವರು ಎಎನ್‌ಐಗೆ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆಗೂ ಮುನ್ನಾ ಸಿಎಎ ಜಾರಿಗೆ: ಅಮಿತ್ ಶಾ 

ಈ ವರ್ಷದ ಫೆಬ್ರವರಿಯಲ್ಲಿ ಅಮಿತ್ ಶಾ ಅವರು ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಅಧಿಸೂಚನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com