ದೆಹಲಿ ಬಜೆಟ್ 2024: 'ಮುಖ್ಯಮಂತ್ರಿ ಮಹಿಳಾ ಸಮ್ಮಾನ್' ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆದಾಯ

ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಕೇಜ್ರಿವಾಲ್ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು ರೂ. 1,000 ಆದಾಯ ಪಡೆಯಲಿದ್ದಾರೆ.
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಕೇಜ್ರಿವಾಲ್ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು ರೂ. 1,000 ಆದಾಯ ಪಡೆಯಲಿದ್ದಾರೆ.

ಸೋಮವಾರ ದೆಹಲಿ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ದೆಹಲಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ಅತಿಶಿ ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಈ ಯೋಜನೆಯನ್ನು ಪ್ರಕಟಿಸಿದರು. ಸರ್ಕಾರ ರಾಮರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.

ಕೇಜ್ರಿವಾಲ್
ಸಮನ್ಸ್ ಕಾನೂನುಬಾಹಿರ, ಇ. ಡಿ ವಿಚಾರಣೆಗೆ ಹಾಜರಾಗಲು ಸಿದ್ಧ ಆದರೆ..: ಅರವಿಂದ್ ಕೇಜ್ರಿವಾಲ್

ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ 2024-25ನೇ ಆರ್ಥಿಕ ವರ್ಷದಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಕೇಜ್ರಿವಾಲ್ ಸರ್ಕಾರ ರೂ. 1,000 ಮಾಸಿಕ ಆದಾಯ ನೀಡಲಿದೆ. ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com