ತೆಲಂಗಾಣದಲ್ಲಿ 56,000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಸುಮಾರು 56,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.
ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಆದಿಲಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಸುಮಾರು 56,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತೆಲಂಗಾಣದ ಅಭಿವೃದ್ಧಿಯ ಕನಸನ್ನು ನನಸಾಗಿಸಲು ಕೇಂದ್ರ ಎಲ್ಲಾ ಬೆಂಬಲವನ್ನು ನೀಡುತ್ತಿದೆ ಎಂದು ಹೇಳಿದರು. ವಿದ್ಯುತ್, ರೈಲು ಮತ್ತು ರಸ್ತೆಗಳಿಗೆ ಸಂಬಂಧಿಸಿದ ಹೊಸ ಅಭಿವೃದ್ಧಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತಿವೆ ಎಂದರು.

ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ, ದೇಶದ 140 ಕೋಟಿ ಜನ ನನ್ನ ಕುಟುಂಬ ಇದ್ದಂತೆ. ನನ್ನ ಜೀವನ ತೆರೆದ ಪುಸ್ತಕ ಎಂದು ಹೇಳಿದರು.

ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಅಭಿವೃದ್ಧಿ ಕಾರ್ಯಗಳು ಅನೇಕರ ಬದುಕನ್ನು ಬದಲಾಯಿಸುತ್ತದೆ: ಪಂಚ ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ

"ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ ಆಳವಾಗಿ ಮುಳುಗಿರುವ ಇಂಡಿಯಾ ಮೈತ್ರಿಕೂಟದ ನಾಯಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ನಾನು ಅವರ 'ಪರಿವಾರವಾದ'ವನ್ನು ಪ್ರಶ್ನಿಸಿದಾಗ, ಅವರು ಮೋದಿಗೆ ಕುಟುಂಬವಿಲ್ಲ ಎಂದು ಹೇಳಲು ಪ್ರಾರಂಭಿಸಿದ್ದಾರೆ" ಎಂದು ಪ್ರಧಾನಿ ತಿರುಗೇಟು ನೀಡಿದರು.

"ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನ ನನ್ನ ಕುಟುಂಬ ಇದ್ದಂತೆ. ಇಂದು ದೇಶದ ಕೋಟಿ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರು ಮೋದಿಯವರ ಕುಟುಂಬ. ದೇಶದ ಪ್ರತಿಯೊಬ್ಬ ಬಡವರೂ ನನ್ನ ಕುಟುಂಬ, ಯಾರೂ ಇಲ್ಲದವರು ಸಹ ಮೋದಿ ನನ್ನವರು ಎಂದು ಹೇಳುತ್ತಾರೆ ಮತ್ತು ಮೋದಿ ಅವರಿಗೂ ಸೇರಿದ್ದಾರೆ. 'ನೇನೆ ಮೋದಿ ಕುಟುಂಬ' (ನಾನು ಮೋದಿ ಕುಟುಂಬ) ಎಂದು ಹೇಳುತ್ತಾರೆ ಎಂದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಪ್ರಧಾನಿಯವರು ದೊಡ್ಡಣ್ಣನಿದ್ದಂತೆ. ದೊಡ್ಡ ಸಹೋದರನ ಸಹಾಯದಿಂದ ಮಾತ್ರ ರಾಜ್ಯಗಳು ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ" ಎಂದು ಅವರು ಹೇಳಿದರು. ಪ್ರಧಾನಿಯವರ ಬೆಂಬಲದಿಂದ ಮಾತ್ರ ತೆಲಂಗಾಣ ಗುಜರಾತ್‌ನಂತೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com