ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್‌ಗೆ ಬಾಂಬ್ ಬೆದರಿಕೆ, ಎಫ್‌ಐಆರ್ ದಾಖಲು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್
Updated on

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಾರ್ಚ್ 2 ರಂದು ಭದ್ರತಾ ಪ್ರಧಾನ ಕಚೇರಿಯಲ್ಲಿ ನಿಯೋಜಿಸಲಾದ ಮುಖ್ಯ ಕಾನ್‌ಸ್ಟೆಬಲ್‌ಗೆ ಬೆದರಿಕೆ ಕರೆ ಮಾಡಲಾಗಿತ್ತು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಎಂದು ಮುಖ್ಯ ಕಾನ್‌ಸ್ಟೆಬಲ್‌ಗೆ ತಿಳಿಸಿ ಸಂಪರ್ಕ ಕಡಿತಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್
ರಾಮಮಂದಿರ ಉದ್ಘಾಟನೆ: 'ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣ, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ'- ಯೋಗಿ ಆದಿತ್ಯಾನಾಥ್

ಅಪರಿಚಿತ ಕರೆ ಮಾಡಿದವರ ವಿರುದ್ಧ ಮಹಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com