ನಕ್ಸಲ್ ನಂಟು ಪ್ರಕರಣ: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಮಹಾರಾಷ್ಟ್ರ

ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.
ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್
ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್

ನವದೆಹಲಿ: ನಿಷೇಧಿತ ಸಿಪಿಐ-ಮಾವೋವಾದಿಗಳೊಂದಿಗೆ ನಂಟು ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಸಾಯಿಬಾಬಾ ಅವರ ವಿರುದ್ಧದ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿ ಆರೋಪಿಯನ್ನು ಖುಲಾಸೆಗೊಳಿಸಿದೆ.

ಸಾಯಿಬಾಬಾ(54) ಅವರಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಮತ್ತು ಪ್ರಕರಣದ ಇತರ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್
ನಕ್ಸಲ್ ಜೊತೆಗಿನ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಖುಲಾಸೆ

ಗಾಲಿಕುರ್ಚಿಯಲ್ಲೇ ಕುಳಿತಿರುವ ವಿಕಲಚೇತನ ಸಾಯಿಬಾಬಾ ಅವರು 2014ರಲ್ಲಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

2017ರಲ್ಲಿ ಪ್ರೊ.ಸಾಯಿಬಾಬಾ ಹಾಗೂ ಇತರ ಐವರನ್ನು ಸೆಷನ್ಸ್‌ ಕೋರ್ಟ್‌ ದೋಷಿ ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. 2022ರ ಅಕ್ಟೋಬರ್‌ 14ರಂದು ವಿಕಲಚೇತನ ಸಾಯಿಬಾಬಾ ಅವರನ್ನು ಹೈಕೋರ್ಟ್‌ ಖುಲಾಸೆಗೊಳಿಸಿತ್ತು. ಆದರೆ ಸುಪ್ರೀಂಕೋರ್ಟ್‌ ಖುಲಾಸೆಯನ್ನು ರದ್ದುಗೊಳಿಸಿ, ಮರುವಿಚಾರಣೆ ನಡೆಸುವಂತೆ ಹೈಕೋರ್ಟ್‌ ಗೆ ನಿರ್ದೇಶನ ನೀಡಿತ್ತು. ಇದೀಗ ಮತ್ತೆ ಹೈಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com