ಸಂದೇಶಖಾಲಿ ಪ್ರಕರಣ ಸಿಬಿಐಗೆ ಒಪ್ಪಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ

ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
mamata
mamata

ನವದೆಹಲಿ: ಪಶ್ಚಿಮ ಬಂಗಾಳದ ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ. ಆದರೆ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠ ಇಂದು ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹಾಗೂ ಪ್ರಮುಖ ಆರೋಪಿ ಷಹಜಹಾನ್ ಶೇಖ್‌ನನ್ನು ಸಂಜೆ 4.30 ರೊಳಗೆ ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ.

ಇದರ ಬೆನ್ನಲ್ಲೇ ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಯ ತನಿಖೆಯನ್ನು ವಹಿಸಿಕೊಳ್ಳಲು ಸಿಬಿಐ ಪಶ್ಚಿಮ ಬಂಗಾಳ ಪೊಲೀಸರನ್ನು ಸಂಪರ್ಕಿಸಿದೆ.

mamata
ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದು, ತುರ್ತು ವಿಚಾರಣೆ ಕೋರಿದ್ದಾರೆ. ಆದರೆ ಪೀಠ ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ್ದು, ಈ ವಿಷಯವನ್ನು ಉನ್ನತ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಮುಂದೆ ಪ್ರಸ್ತಾಪಿಸುವಂತೆ ಸಿಂಘ್ವಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com