ಮೋದಿ ಕುರಿತು 'ಪನೌತಿ, ಪಿಕ್ ಪಾಕೆಟ್' ಟೀಕೆ: ''ಮಾತನಾಡುವಾಗ ಎಚ್ಚರವಿರಲಿ'', ರಾಹುಲ್ ಗಾಂಧಿಗೆ ಚುನಾವಣಾ ಆಯೋಗ Warning!

ಪ್ರಧಾನಿ ನರೇಂದ್ರ ಮೋದಿ ಕುರಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.

ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ಭಾಷಣದ ತಯಾರಿಯಲ್ಲಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಹುಮ್ಮಸ್ಸಿನಲ್ಲಿದ್ದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಪನೌತಿ, ಪಿಕ್​ ಪಾಕೆಟ್​ ಎಂಬ ಪದಗಳ ಬಳಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕಾಂಗ್ರೆಸ್​ ನಾಯಕನನ್ನು ಎಚ್ಚರಿಸಿದೆ. ಈ ಹಿಂದೆ ಪ್ರಧಾನಿ ಮೋದಿ ವಿರುದ್ಧ ಮಾತನಾಡುವಾಗ ಬಳಸಿದ ಪದಗಳ ಸಂಬಂಧ ಕೇಂದ್ರ ಚುನಾವಣಾ ಆಯೋಗ​ ವಾರ್ನಿಂಗ್​ ನೀಡಿದ್ದು, ಮೋದಿ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ಎಂದು ರಾಹುಲ್​ ಗಾಂಧಿಗೆ ತಾಕೀತು ಮಾಡಿದೆ.

ರಾಹುಲ್ ಗಾಂಧಿ
ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ; ಅಮೇಥಿ, ವಯನಾಡ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ

ಆಯೋಗದ ವಾರ್ನಿಂಗ್ ಏನು?

ಮುಂಬರುವ ಚುನಾವಣೆ ಪ್ರಚಾರ ಕಾರ್ಯದಲ್ಲೂ ತಮ್ಮ ಸೂಚನೆಯನ್ನು ಪಾಲಿಸಬೇಕು ಎಂದು ರಾಹುಲ್​ ಗಾಂಧಿಗೆ ಕಮಿಷನ್​ ಆದೇಶಿಸಿದೆ. ಚುನಾವಣಾ ಆಯೋಗವು ಮಾರ್ಚ್ 1 ರಂದು ಹೊರಡಿಸಿರುವ ತನ್ನ ಆದೇಶದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಈ ಹಿಂದೆ ನೊಟೀಸ್ ಪಡೆದಿರುವ ಪಕ್ಷದ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಪುನರಾವರ್ತಿತವಾಗಿ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದೆ.

ಏನಿದು ಪ್ರಕರಣ?

ಕಳೆದ ವರ್ಷ ನವೆಂಬರ್ 22 ರಂದು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಪಿಕ್ ಪಾಕೆಟ್', 'ಪನೌತಿ' ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಚುನಾವಣಾ ಆಯೋಗವನ್ನು ಕೇಳಿತ್ತು. ರಾಹುಲ್​ ಗಾಂಧಿಯವರ ಪದ ಬಳಕೆ ಕೆಟ್ಟ ಅಭಿರುಚಿಯನ್ನು ತೋರಿಸುತ್ತದೆ. 8 ವಾರಗಳ ಒಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ಖಡಕ್​ ವಾರ್ನಿಂಗ್​ ನೀಡಿದೆ.

ರಾಹುಲ್ ಗಾಂಧಿ
ಮುಚ್ಚಿರುವ ಉದ್ಯೋಗದ ಬಾಗಿಲನ್ನು ಯುವಕರಿಗೆ ಇಂಡಿಯಾ ಮೈತ್ರಿಕೂಟ ತೆರೆಯುತ್ತದೆ: ರಾಹುಲ್ ಗಾಂಧಿ

ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ತರಾಟೆ!

ನವೆಂಬರ್ 22 ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಜೇಬುಗಳ್ಳ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಅಂದಿನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರ ಪೀಠವು ಹೇಳಿಕೆಯು ರಾಹುಲ್ ಗಾಂಧಿ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ನವೆಂಬರ್ 23 ರಂದು ರಾಹುಲ್ ಗಾಂಧಿಗೆ ನೀಡಲಾದ ನೋಟಿಸ್‌ನ ಪ್ರಕಾರ ಎಂಟು ವಾರಗಳಲ್ಲಿ ಕಾನೂನಿನ ಪ್ರಕಾರ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com