ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ; ಅಮೇಥಿ, ವಯನಾಡ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಾರಿಯೂ ಅಮೇಥಿ ಮತ್ತು ವಯನಾಡ್ ಎರಡರಿಂದಲೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಳೆದ ತಿಂಗಳು ಮತದಾರರಿಗೆ ತಿಳಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ
ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ಅಮ್ಮನ ಕ್ಷೇತ್ರ ರಾಯ್‌ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?

ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ರಾಯ್ ಬರೇಲಿಯಿಂದ ಮೂರು ಬಾರಿ ಗೆದ್ದಿದ್ದರು. ಅವರ ನಂತರ ಸೋನಿಯಾ ಗಾಂಧಿ ಅವರು ಐದು ಬಾರಿ ರಾಯ್ ಬರೇಲಿಯಿಂದ ಸಂಸದೆಯಾಗಿದ್ದಾರೆ. ರಾಯ್ ಬರೇಲಿ ಹಾಲಿ ಸಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಕಳೆದ ತಿಂಗಳು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com