ಸಂದೇಶ್‌ಖಾಲಿ ಸುಂಟರಗಾಳಿ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ: ಪ್ರಧಾನಿ ಮೋದಿ

'ಸಂದೇಶ್‌ಖಾಲಿ ಸುಂಟರಗಾಳಿ' ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬರಾಸತ್: 'ಸಂದೇಶ್‌ಖಾಲಿ ಸುಂಟರಗಾಳಿ' ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ ಮತ್ತು ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ಛಿದ್ರಗೊಳಿಸುವಲ್ಲಿ 'ನಾರಿ ಶಕ್ತಿ'(ಮಹಿಳಾ ಶಕ್ತಿ) ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಇಂದು ಬರಾಸತ್ ನಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಂದೇಶ್‌ಖಾಲಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಟಿಎಂಸಿ ನಾಯಕರು ವಿವಿಧ ಸ್ಥಳಗಳಲ್ಲಿ ಬಡ, ದಲಿತ ಮತ್ತು ಬುಡಕಟ್ಟು ಕುಟುಂಬಗಳ ಸಹೋದರಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಪಶ್ಚಿಮ ಬಂಗಾಳ ಮತ್ತು ದೇಶದ ಮಹಿಳೆಯರು ಆಕ್ರೋಶಗೊಂಡಿದ್ದಾರೆ. ಸಂದೇಶಖಾಲಿಯ ಈ ಸುಂಟರಗಾಳಿ ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪುತ್ತದೆ ಮತ್ತು ರಾಜ್ಯದಾದ್ಯಂತ ಟಿಎಂಸಿಯನ್ನು ನಾಶಪಡಿಸುತ್ತದೆ ಎಂದು ಮೋದಿ ಹೇಳಿದರು.

ಪ್ರಧಾನಿ ಮೋದಿ
ಸಂದೇಶಖಾಲಿ ಪ್ರಕರಣ ಸಿಬಿಐಗೆ ಒಪ್ಪಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ

ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ನದಿತೀರದ ದ್ವೀಪದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಭೂಕಬಳಿಕೆ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಟಿಎಂಸಿ ನಾಯಕ ಷಹಜಾಹನ್ ಶೇಖ್ ನನ್ನು ಬಂಧಿಸಲಾಗಿದೆ.

ಏತನ್ಮಧ್ಯೆ, ಅಮಾನತುಗೊಂಡಿರುವ ಟಿಎಂಸಿ ನಾಯಕ ಷಹಜಾಹನ್ ಶೇಖ್ ಅವರನ್ನು ಸಿಬಿಐಗೆ ಹಸ್ತಾಂತರಿಸುವ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ, ಇದು "ದೊಡ್ಡ ನಾಚಿಕೆಗೇಡಿನ ಸಂಗತಿ" ಎಂದು ತರಾಟೆಗೆ ತೆಗೆದುಕೊಂಡಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತೆರಳುವ ರಾಜ್ಯ ಸರ್ಕಾರದ ನಿರ್ಧಾರವು "ಅದರ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ" ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com