ಮಿಷನ್ AI, ನೌಕಾಪಡೆಗೆ 34 ALH Dhruv ಹೆಲಿಕಾಪ್ಟರ್ ಖರೀದಿಗೆ ಸಂಪುಟ ಅಸ್ತು; ಕೇಂದ್ರ ಸಂಪುಟ ಸಭೆಯ ಮಹತ್ವದ ನಿರ್ಣಯಗಳು!

ಮಿಷನ್ AIಗೆ ಅನುಮೋದನೆ, ನೌಕಾಪಡೆಗೆ 34 ALH Dhruv ಹೆಲಿಕಾಪ್ಟರ್ ಖರೀದಿ, ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಸೇರಿದಂತೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕೇಂದ್ರ ಸಂಪುಟ ಸಭೆ
ಕೇಂದ್ರ ಸಂಪುಟ ಸಭೆ
Updated on

ನವದೆಹಲಿ: ಮಿಷನ್ AIಗೆ ಅನುಮೋದನೆ, ನೌಕಾಪಡೆಗೆ 34 ALH Dhruv ಹೆಲಿಕಾಪ್ಟರ್ ಖರೀದಿ, ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಸೇರಿದಂತೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರದ ಸಚಿವ ಸಂಪುಟ ಸಭೆಯು ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಮಿಷನ್‌ಗಾಗಿ ₹10,372 ಕೋಟಿ ಒದಗಿಸಲು ಅನುಮೋದನೆ ನೀಡಲಾಗಿದ್ದು, ಭಾರತೀಯ ಸೇನೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ 34 ಹೊಸ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್‌ಗಳನ್ನು ಖರೀದಿಸುವ ಪ್ರಸ್ತಾವನೆಗಳಿಗೆ ಇಂದು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.

ಕೇಂದ್ರ ಸಂಪುಟ ಸಭೆ
ರೈತರಿಗೆ ಸಿಹಿಸುದ್ದಿ: ಸೆಣಬಿನ ಬೆಂಬಲ ಬೆಲೆ ಹೆಚ್ಚಳ, ಕೇಂದ್ರ ಸಂಪುಟ ಸಭೆ ಮಹತ್ವದ ನಿರ್ಧಾರ!

ಮಿಷನ್ AIಗೆ ಅನುಮೋದನೆ

ಕೇಂದ್ರದ ಸಚಿವ ಸಂಪುಟ ಸಭೆಯು ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಮಿಷನ್‌ಗಾಗಿ ₹10,372 ಕೋಟಿ ಒದಗಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅನುಮೋದನೆಗೊಂಡಿರುವ ಮೊತ್ತವನ್ನು ಬೃಹತ್ ಕಂಪ್ಯುಟಿಂಗ್ ಮೂಲಸೌಕರ್ಯ ನಿರ್ಮಾಣಕ್ಕೆ ಬಳಸಲಾಗುತ್ತದೆ. ಎಐ ವ್ಯವಸ್ಥೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅದರ ಪಾಲುದಾರರ ಅನುಕೂಲಕ್ಕಾಗಿ 10,000 ಸಿಪಿಯು ಒಳಗೊಂಡ ಸೂಪರ್ ಕಂಪ್ಯುಟಿಂಗ್ ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ಎಐ ತಂತ್ರಜ್ಞರಿಗೆ ಅನುಕೂಲವಾಗಲಿದೆ.

ಎಐ ಮಿಷನ್ ಅಡಿ ನಿರ್ಮಾಣಗೊಳ್ಳುವ ಸೂಪರ್‌ ಕಂಪ್ಯೂಟಿಂಗ್ ವ್ವವಸ್ಥೆಯಲ್ಲಿ ನವೋದ್ಯಮ, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಕೈಗಾರಿಕೋದ್ಯಮಿಗಳಿಗೆ ಅವಕಾಶ ನೀಡಲಾಗುವುದು. ಈ ಸಂಬಂಧ ರಾಷ್ಟ್ರೀಯ ದತ್ತಾಂಶ ಕಚೇರಿ ತೆರೆಯಲಾಗುವುದು. ಅದು ದತ್ತಾಂಶದ ಗುಣಮಟ್ಟ ವೃದ್ಧಿ ಮತ್ತು ಎಐ ಅಭಿವೃದ್ಧಿ ಹಾಗೂ ನಿಯೋಜನೆಗೆ ಅಂಕಿ ಅಂಶದ ಲಭ್ಯತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳ ಜೊತೆ ಸಮನ್ವಯ ಸಾಧಿಸುವ ಕೆಲಸ ಮಾಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ನೌಕಾಪಡೆಗೆ 34 ALH Dhruv ಹೆಲಿಕಾಪ್ಟಪ್ ಖರೀದಿ

ಭಾರತೀಯ ಸೇನೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ 34 ಹೊಸ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್‌ಗಳನ್ನು ಖರೀದಿಸುವ ಪ್ರಸ್ತಾವನೆಗಳಿಗೆ ಇಂದು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದ್ದು, ಭಾರತೀಯ ಸೇನೆಯು ಈ ಪೈಕಿ 25 ಹೆಲಿಕಾಪ್ಟರ್‌ಗಳನ್ನು ಪಡೆಯಲಿದ್ದು, ಭಾರತೀಯ ಕೋಸ್ಟ್ ಗಾರ್ಡ್ ಅವುಗಳಲ್ಲಿ ಒಂಬತ್ತು ಪಡೆಯಲಿದೆ. ಈ ಹೆಲಿಕಾಪ್ಟರ್‌ಗಳನ್ನು ಸಾರ್ವಜನಿಕ ವಲಯದ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ ಸ್ಥಳೀಯವಾಗಿ ನಿರ್ಮಿಸಲಾಗುವುದು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

LPG Subsidy

ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ 300 ರೂಪಾಯಿ ಸಬ್ಸಿಡಿಯನ್ನು (LPG Subsidy) 2024-25ನೇ ಹಣಕಾಸು ವರ್ಷದವರೆಗೆ ವಿಸ್ತರಣೆ ಮಾಡಿದೆ. ಇದರೊಂದಿಗೆ ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಖರೀದಿಸುವವರಿಗೆ ಅನುಕೂಲವಾಗಲಿದೆ. ದೇಶದ 10 ಕೋಟಿ ಗೃಹಿಣಿಯರು ಸಬ್ಸಿಡಿಯ ಲಾಭ ಪಡೆಯಲಿದ್ದಾರೆ.

ಕೇಂದ್ರ ಸರ್ಕಾರಿ ನೌಕರ ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ (Central Government Employees) ತುಟ್ಟಿಭತ್ಯೆಯನ್ನು (DA Hike) ಶೇ.4ರಷ್ಟು ಏರಿಕೆ ಮಾಡಿದ್ದು, ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಭರ್ಜರಿ ಅನುಕೂಲವಾಗಲಿದೆ. ಅಷ್ಟೇ ಅಲ್ಲ, ಗ್ರ್ಯಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ.

ಸೆಣಬು ಬೆಂಬಲ ಬೆಲೆ ಹೆಚ್ಚಳ

ಕೇಂದ್ರ ಸರ್ಕಾರವು (Central Government) ಸೆಣಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ್ದು, ಕಚ್ಚಾ ಸೆಣಬಿಗೆ (Raw Jute) 285 ರೂಪಾಯಿ ಕನಿಷ್ಠ ಬೆಂಬಲ ಬೆಲೆ (MSP For Raw Jute) ಘೋಷಿಸಿದೆ. ಕೇಂದ್ರ ಸರ್ಕಾರವು 2024-25ನೇ ಹಣಕಾಸು ವರ್ಷಕ್ಕಾಗಿ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಇದರಿಂದಾಗಿ ಸೆಣಬು ಬೆಳೆಯುವ ರೈತರು ಲಾಭ ಪಡೆಯಲಿದ್ದಾರೆ.

ಈಶಾನ್ಯ ರಾಜ್ಯಗಳಿಗೆ 'UNNATI' ಯೋಜನೆ

ಈಶಾನ್ಯ ರಾಜ್ಯಗಳಿಗೆ 2024 ರ 'UNNATI' (ಉತ್ತರ ಪೂರ್ವ ಪರಿವರ್ತನಾ ಕೈಗಾರಿಕೀಕರಣ ಯೋಜನೆ) ಎಂಬ 10,037 ಕೋಟಿ ರೂಪಾಯಿಗಳ ಹೊಸ ಕೈಗಾರಿಕಾ ಅಭಿವೃದ್ಧಿ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಈ ಯೋಜನೆಯು ಪ್ರದೇಶದ ಒಟ್ಟಾರೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸರಿಯಾದ ದಾರಿಯನ್ನು ಖಚಿತಪಡಿಸಿಕೊಳ್ಳಲು "ಲಾಭದಾಯಕ ಉದ್ಯೋಗ" ವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲು ಅಥವಾ ಅಸ್ತಿತ್ವದಲ್ಲಿರುವ ಘಟಕಗಳ ಗಮನಾರ್ಹ ವಿಸ್ತರಣೆಯನ್ನು ಕೈಗೊಳ್ಳಲು ಸರ್ಕಾರವು ಹೂಡಿಕೆದಾರರಿಗೆ ಪ್ರೋತ್ಸಾಹವನ್ನು ನೀಡುತ್ತದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com