ಹಿಮಾಚಲ ಪ್ರದೇಶ: ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಮಾಡಿದ 9 ವಿದ್ಯಾರ್ಥಿಗಳ ಅಮಾನತು

ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ 9 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಸಿರ್ಮೌರ್ ಜಿಲ್ಲೆಯ ನಹಾನ್‌ನ ಡಾ ವೈಎಸ್ ಪರ್ಮಾರ್ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ 9 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಸಿರ್ಮೌರ್ ಜಿಲ್ಲೆಯ ನಹಾನ್‌ನ ಡಾ ವೈಎಸ್ ಪರ್ಮಾರ್ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಜ್ಯೂನಿಯರ್ ಬ್ಯಾಚ್ ಗೆ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ 2022 ರ ಬ್ಯಾಚ್‌ನ ಒಂಬತ್ತು ವಿದ್ಯಾರ್ಥಿಗಳನ್ನು 45 ದಿನಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಕೊಪ್ಪಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಖಾಸಗಿ ಅಂಗಗಳಿಗೆ ಗಾಯ!

ಮಾರ್ಚ್ 4 ರಂದು ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ನಡೆದ ಜೂನಿಯರ್ ವಿದ್ಯಾರ್ಥಿಗಳ (2023 ಬ್ಯಾಚ್) ಕಿರುಕುಳ ಪ್ರಕರಣದಲ್ಲಿ ಈ ಒಂಬತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದು, ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ ಎಂದು ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ತಂಡವೊಂದು ತನಿಖೆ ನಡೆಸಿದ್ದು, ರ‍್ಯಾಗಿಂಗ್ ವಿರೋಧಿ ಸಮಿತಿಯು ಒಂಬತ್ತು ವಿದ್ಯಾರ್ಥಿಗಳನ್ನು 45 ದಿನಗಳ ಕಾಲ ಅಮಾನತುಗೊಳಿಸಿದ್ದು, ಪ್ರತಿ ವಿದ್ಯಾರ್ಥಿಗೆ 50,000 ರೂ. ದಂಡ ವಿಧಿಸಲಾಗಿದೆ. ಅಲ್ಲದೇ ಒಂದು ವರ್ಷದವರೆಗೆ ಯಾವುದೇ ಕ್ರೀಡೆ ಅಥವಾ ಸಾಹಿತ್ಯ ಸಮಾರಂಭದಲ್ಲಿ ಭಾಗವಹಿಸಲು ಅವರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com