ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ ಅವರನ್ನು ಅಪಹರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಪಹರಣಕ್ಕೆ ಕಾರಣ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ವರದಿಗಳ ಪ್ರಕಾರ ಇದು ಸುಲಿಗೆ ಪ್ರಕರಣವಾಗಿದ್ದು, ಈ ಹಿಂದೆ ಅವರ ಕುಟುಂಬಕ್ಕೆ ಇಂತಹ ಬೆದರಿಕೆಗಳು ಬಂದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ನಂತರ, JCO ಸಿಂಗ್ ಅವರನ್ನು ರಕ್ಷಿಸಲು ಎಲ್ಲಾ ಭದ್ರತಾ ಸಂಸ್ಥೆಗಳಿಂದ ಸಂಘಟಿತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 102ರಲ್ಲಿ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅಪಹರಣಕ್ಕೆ ಕಾರಣ ತಿಳಿದುಬಂದಿಲ್ಲ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Advertisement