ಲೋಕಸಭೆ ಚುನಾವಣೆ: ತಮಿಳುನಾಡು, ಪುದುಚೇರಿಯಲ್ಲಿ ಕಾಂಗ್ರೆಸ್ ಗೆ 10 ಸ್ಥಾನ ಹಂಚಿದ ಡಿಎಂಕೆ
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಗಾಗಿ ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ 10 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಡಿಎಂಕೆ ಶನಿವಾರ ಹಂಚಿಕೆ ಮಾಡಿದೆ. 2019ರ ಸೀಟು ಹಂಚಿಕೆ ಸೂತ್ರವನ್ನೇ ಪುನಾರಾವರ್ತಿಸಲಾಗಿದೆ.
ದ್ರಾವಿಡ ಪಕ್ಷವು ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಒಂಬತ್ತು ಸ್ಥಾನಗಳನ್ನು ನೀಡಿದೆ. ಜೊತೆಗೆ ಪುದುಚೇರಿಯಲ್ಲಿ ಒಂದು ಸ್ಥಾನವನ್ನಷ್ಟೇ ನೀಡಲಾಗಿದೆ.
ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಅಜೋಯ್ ಕುಮಾರ್ ಅವರ ಸಮ್ಮುಖದಲ್ಲಿ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಯಿತು.
ಸುದ್ದಿಗಾರರ ಜೊತೆಗೆ ಮಾತನಾಡಿದ ವೇಣುಗೋಪಾಲ್, ಡಿಎಂಕೆ ನೇತೃತ್ವದ ಮೈತ್ರಿಕೂಟವು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು ಮತ್ತು ಕಾಂಗ್ರೆಸ್- ಡಿಎಂಕೆ ನಡುವಿನ 'ಬಾಂಧವ್ಯ ಗಟ್ಟಿಯಾಗಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ