ಅರುಣಾಚಲ ಪ್ರದೇಶ: ಮಾಜಿ ಸಿಎಂ ನಬಮ್ ತುಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಇಟಾನಗರ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮೂವರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ತುಕಿ ಶುಕ್ರವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ರಾಜೀನಾಮೆ ಕಳುಹಿಸಿದ್ದಾರೆ.
ಶಾಸಕರು ಬೇರೆ ರಾಜಕೀಯ ಪಕ್ಷಗಳಿಗೆ ಪಕ್ಷಾಂತರ ಮಾಡುವುದನ್ನು ತಡೆಯಲು ಸಾಧ್ಯವಾಗದ ಕಾರಣ ನೈತಿಕ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರೆ’’ ಎಂದು ಎಪಿಸಿಸಿ ಪ್ರಧಾನ ಕಾರ್ಯದರ್ಶಿ ಗ್ಯಾಮರ್ ತಾನಾ ಹೇಳಿದ್ದಾರೆ.
ತುಕಿ ರಾಜ್ಯದ ಸಾಗಲೇ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ತಿಂಗಳ ಆರಂಭದಲ್ಲಿ, ಪೂರ್ವ ಸಿಯಾಂಗ್ ಜಿಲ್ಲೆಯ ಮೆಬೊದಿಂದ ಆರು ಬಾರಿ ಶಾಸಕರಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಲೊಂಬೊ ತಾಯೆಂಗ್ ಬಿಜೆಪಿಗೆ ಸೇರ್ಪಡೆಗೊಂಡರು. ಕಳೆದ ತಿಂಗಳು ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್‌ಡಾಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ