ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸಿಪಿಐ ವಿದಾಯ! ಲೋಕಸಭಾ ಚುನಾವಣೆಗೆ ಏಕಾಂಗಿ ಸ್ಪರ್ಧೆ

ಜಾರ್ಖಂಡ್ ನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಇಂಡಿಯಾ ಮೈತ್ರಿಕೂಟದಿಂದ ಬೇರ್ಪಟ್ಟಿದ್ದು, ಮುಂಬರುವ ಚುನಾವಣೆಯಲ್ಲಿ 14 ಲೋಕಸಭಾ ಸ್ಥಾನಗಳ ಪೈಕಿ ಎಂಟು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಂಚಿ: ಜಾರ್ಖಂಡ್ ನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಇಂಡಿಯಾ ಮೈತ್ರಿಕೂಟದಿಂದ ಬೇರ್ಪಟ್ಟಿದ್ದು, ಮುಂಬರುವ ಚುನಾವಣೆಯಲ್ಲಿ 14 ಲೋಕಸಭಾ ಸ್ಥಾನಗಳ ಪೈಕಿ ಎಂಟು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಜಾರ್ಖಂಡ್‌ನಿಂದ ಲೋಕಸಭೆಗೆ ಸಿಪಿಐನಿಂದ ಯಾವುದೇ ಪ್ರತಿನಿಧಿ ಇಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾವೇ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಮಹೇಂದ್ರ ಪಾಠಕ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

"ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ, ಆದರೆ ಕಾಂಗ್ರೆಸ್ ಮತ್ತು 'ಮಹಾಘಟಬಂಧನ್' ಸೀಟು ಹಂಚಿಕೆ ಕುರಿತು ಇನ್ನೂ ಯಾವುದೇ ಮಾತುಕತೆ ನಡೆಸಿಲ್ಲ, ಆದ್ದರಿಂದ ನಾವು ಏಕಾಂಗಿಯಾಗಿ ಹೋಗಲು ನಿರ್ಧರಿಸಿದ್ದೇವೆ. ರಾಂಚಿಯಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು

ಸಿಪಿಐ ತನ್ನ ಅಭ್ಯರ್ಥಿಗಳನ್ನು ರಾಂಚಿ, ಹಜಾರಿಬಾಗ್, ಕೊಡೆರ್ಮಾ, ಛತ್ರ, ಪಲಮು, ಗಿರಿದಿಹ್, ದುಮ್ಕಾ ಮತ್ತು ಜಮ್ಶೆಡ್‌ಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿಸಲಿದೆ.ಮಾರ್ಚ್ 16 ರ ನಂತರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಪಾಠಕ್ ಹೇಳಿದರು.

ಸಾಂದರ್ಭಿಕ ಚಿತ್ರ
ರಾಹುಲ್ ಗಾಂಧಿ, ಶಶಿ ತರೂರ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ

ಈ ಮಧ್ಯೆ ಸಿಪಿಐ ರಾಜ್ಯ ಘಟಕದ ಇಂತಹ ನಿರ್ಧಾರವು ಪಕ್ಷದೊಳಗಿನ ಶಿಸ್ತಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಜಾರ್ಖಂಡ್‌ನಲ್ಲಿ ಆಡಳಿತಾರೂಢ ಒಕ್ಕೂಟವನ್ನು ಮುನ್ನಡೆಸುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹೇಳಿದೆ.

"ರಾಜ್ಯ ಘಟಕವು ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದೇ ಎಂಬುದು ನನ್ನ ತಿಳುವಳಿಕೆಯನ್ನು ಮೀರಿದೆ. ಸೀಟು ಹಂಚಿಕೆ ಕುರಿತು ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಜೆಎಂಎಂ ವಕ್ತಾರ ಮನೋಜ್ ಪಾಂಡೆ ಹೇಳಿದರು.

ರಾಜ್ಯದ 14 ಸ್ಥಾನಗಳ ಪೈಕಿ ಬಿಜೆಪಿ 11, ಎಜೆಎಸ್‌ಯು ಪಕ್ಷ 1, ಜೆಎಂಎಂ 1 ಮತ್ತು ಕಾಂಗ್ರೆಸ್ ಒಂದನ್ನು ಹೊಂದಿದೆ.ಆದರೆ, ಕಾಂಗ್ರೆಸ್‌ನ ಏಕೈಕ ಸಂಸದೆ ಗೀತಾ ಕೋರಾ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com