ಲೋಕಪಾಲ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಾಧೀಶ ಎ.ಎಂ. ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಾಧೀಶ ಎ ಎಂ ಖಾನ್ವಿಲ್ಕರ್ ಅವರು ಲೋಕಪಾಲ ಮುಖ್ಯಸ್ಥರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಲೋಕಪಾಲ ಮುಖ್ಯಸ್ಥರಿಗೆ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎ.ಎಂ. ಖಾನ್ವಿಲ್ಕರ್
ಎ.ಎಂ. ಖಾನ್ವಿಲ್ಕರ್

ನವದೆಹಲಿ: ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಾಧೀಶ ಎ ಎಂ ಖಾನ್ವಿಲ್ಕರ್ ಅವರು ಲೋಕಪಾಲ ಮುಖ್ಯಸ್ಥರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಲೋಕಪಾಲ ಮುಖ್ಯಸ್ಥರಿಗೆ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

66 ವರ್ಷದ ನಿವೃತ್ತ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮೇ 13, 2016 ರಿಂದ ಜುಲೈ 29, 2022 ರವರೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಲೋಕಪಾಲ್ ಅಧ್ಯಕ್ಷರಾದ ಖಾನ್ವಿಲ್ಕರ್ ಅವರಿಗೆ ರಾಷ್ಟ್ರಪತಿ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎ.ಎಂ. ಖಾನ್ವಿಲ್ಕರ್
ಲೋಕಪಾಲ್ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ ಮಾಜಿ ನ್ಯಾಯಾಧೀಶ ಎ ಎಂ ಖಾನ್ವಿಲ್ಕರ್ ನೇಮಕ

ಮೇ 27, 2022 ರಂದು ಪಿನಾಕಿ ಚಂದ್ರ ಘೋಸ್ ಅವರ ನಿವೃತ್ತಿಯ ನಂತರ ಖಾಲಿಯಾದ ಹುದ್ದೆಗೆ ಸುಮಾರು ಎರಡು ವರ್ಷಗಳ ನಂತರ ಕಳೆದ ತಿಂಗಳು ನಿವೃತ್ತ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಲೋಕಪಾಲ್‌ನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com